ಒಟ್ಟು 682 ಕಡೆಗಳಲ್ಲಿ , 1 ಕವಿಗಳು , 188 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಳಿದಾಂಪರ್ ಧರಣೀಶ್ವರರ್ ಮಿಗೆ ಪೆರರ್ ಬಿಲ್ಗೊಂಡುಮೇಗೆಯ್ವರೆ ನ್ನೊಳಮಿಂ ತೀರದ ಕಾರ್ಯಭರಮಂ ತೀರ್ಚಲ್ ಪೆರರ್ ಗಂಡರಿ ನ್ನೊಳರೇ ಪಾಂಡವರೆಂಬರೇಗಹನಮೆಂಬಾದರ್ಪದಂತಾಜಿಯೊಳ್ ಸುಳರಂಬೆತ್ತಿರೆ ಸತ್ತರೆನ್ನಿನಿಬರುಂ ತಮ್ಮಂದಿರುಂ ಮಕ್ಕಳುಂ ॥೧೨॥
--------------
ರನ್ನ
ಮುಳಿಸಿಂ ನಂಜಕ್ಕಿಕೊಂದಂದಿನ ಜತುಗೃಹದೊಳ್ ಸುಟ್ಟುಕೊಂದಂದಿನುರ್ವೀ ತಳಮಂ ಜೂದಾಡಿ ಗೆಲ್ದಂದಿನ ನಿಜಕಬರೀನೀವಿಬಂಧಂಗಳಂ ದೋ ರ್ವಳದಿಂದಂ ತಮ್ಮನಿಂದಂ ತೆಗೆಯಿಸಿ ನಡೆದಾ ನೀಚನಾ ದ್ರೋಹನಾ ಸಂ ಚಳನಾ ಚಂಡಾಲನಾ ಪಾತಕನಿರವನಿದಂ ನೋಡು ಪಂಕೇಜವಕ್ತ್ರೇ॥೪೫॥
--------------
ರನ್ನ
ಮೃದು ಪದ್ಯರಚನೆಯೊಳ್ ಕಾ ಳಿದಾಸನುಂ ಗದ್ಯರಚನೆಯೊಳ್ ಬಾಣನುಮಂ ಕದ ಕವಗಳೆನಿಸಿ ನೆಗಳ್ದಿ ರ್ದುದರಿಂ ಸತ್ಕವಿಗಳಿರ್ವರೆಮಗಭಿವಂದ್ಯರ್
--------------
ರನ್ನ
ಮೊನೆಯೊಳಿದಿರ್ಚಿ ಸತ್ತಭಟನಂ ಗಜದೃಷ್ಟಿಯೊಳಣ್ಮಿ ಬೀ ರನನದಟಿಂ ಸಹಸ್ರಭಟರಂ ರಣದೊಳ್ ಪೊಣರ್ದಿಕ್ಕಿ ಸತ್ತ ಗಂ ಡನನರಸುತ್ತೆ ಬರ್ಪ ಸುರಸುಂದರಿಯರ್ಕಳನೀಕ್ಷಿಸುತ್ತುಮೊ ಯ್ಯನೆ ನಡೆದಂ ಪರಾಕ್ರಮನಿಕೇತನನಾ ಫಣಿರಾಜಕೇತನಂ॥೨೦॥
--------------
ರನ್ನ
ಯಮವಾಯುತ್ರಿದಶಾಶ್ವಿನನೀತನಯರುಂ ತಾವಾದರೀಯಯ್ವರುಂ ಹಿಮಕೃದ್ವಂಶಕಳಂಕರಂತವರ್ಗಮಾ ಪಾಂಚಾಲ ಭೂಪಾಲ ಪು ತ್ರಿಮನೋವಲ್ಲಭೆಯಾದಳೆಂದೊಡೆ ಗಡಂ ಕೇಳಲ್ಕದೇಂ ಕ್ಷತ್ರಧ ರ್ಮಮೊ ಭೂಲೋಕಕೆ ಪೇಳಿಮೀ ದೊರೆಯ ಚಾರಿತ್ರಂ ಪೃಥಾಪುತ್ರರಾ॥೩೭॥
--------------
ರನ್ನ
ರತ್ನಪರೀಕ್ಷಕನಾಂ ಕೃತಿ ರತ್ನಪರೀಕ್ಷಕನೆನೆಂದು ಫಣಿಪತಿಯ ಫಣಾ ರತ್ನಮುಮಂ ರನ್ನನ ಕೃತಿ ರತ್ನಮುಮಂ ಪೇಳ್ ಪರೀಕ್ಷಿಪಂಗೆಂಟೆರ್ದೆಯೇ
--------------
ರನ್ನ
ರಸೆಗಿಳಿದನೊ ಮೇಣ್ ನಾಲ್ಕುಂ ದೆಸೆಗಳ ಕೋಣೆಗಳೊಳುಳಿದನೋ ಖಳನಿಲ್ಲೀ ವಸುಮತಿಯೊಳ್ ಗಾಂಧಾರಿಯ ಬಸಿರಂ ಮೇಣ್ ಮಗುಳೆ ಪೋಗಿ ಪೊಕ್ಕಿರ್ದನೋ॥೨೦॥
--------------
ರನ್ನ
ವನರುಹವಿಷ್ಟರಂ ರುಚಿರಂ ರೇಚಕ ಪೂರಕ ಕುಂಭಕಕ್ರಿಯಾ ಮನಮಿರೆ ನೆತ್ತಿಯೊಳ್ ದರನಿಮೀಲಿತ ದೃಷ್ಷಿ ನಿವಿಷ್ಟ ಮಾಗೆ ಮೂ ಗಿನತುದಿಯೊಳ್ ನೀರುದ್ಧ ಮಂತ್ರ ಪದಾಕ್ಷರಂಗಳಂ ಜಿನುಗುತಲಿರ್ದನಾ ಪರಮಯೋಗಿಯವೊಲ್ ಫಣಿರಾಜಕೇತನಂ॥೧೫॥
--------------
ರನ್ನ
ವನಿತೆಯ ಕೇಶಮಂ ಸಭೆಯೊಳೆನ್ನನುಜಂ ತೆಗೆವಲ್ಲಿ ಗಂಡನಾ ಗನೆ ಭಗದತ್ತನಾನೆ ಬರಿಯೆಲ್ವುಡಿವನ್ನೆಗಮೊತ್ತೆ ಗಂಡನಾ ಗನೆ ಕೊಲಲೊಲ್ಲದಂಗಪತಿ ಬಿಲ್ಲೊಳೆ ಕೊಂಡೆಳೆವಲ್ಲಿ ಗಂಡನಾ ಗನೆ ಕುರುಬಾಲಸಂಹರಣ ಮಾತ್ರದೆ ಮಾರುತಿ ಗಂಡನಾದನೇ॥೨೭॥
--------------
ರನ್ನ
ವರಪದ್ಮಾಸನದೊಳ್ ಕನನ್ಮಣಿಮಯಂ ಸಿಂಹಾಸನಂ ಬ್ರಾಹ್ಮಿಯೊಳ್ ಪರಮಶ್ರೀ ಗಣನಾಕ್ಷಸೂತ್ರಮಣಿಯೊಳ್ ರತ್ನೋಜ್ವಲಂ ಭೂಷಣಂ ದೊರೆಯಿಗಿರ್ಪಿನಮೊಂದುಗುಂದದಖಿಲಂ ವಿಜ್ಞಾನದಿಂದಂ ಜಗ ದ್ಗುರುವಾದಂ ನಮಗೀಗೆ ಬೇಳ್ಪವರಮಂ ಶ್ರೀರಾಜಕಂಜಾಸನಂ
--------------
ರನ್ನ
ವಳಿತಶಿಳೀಮುಖಮುತ್ಪಳ ದಳನಯನಂ ಕಂಜರಂಜಿತ ಜಯಲಕ್ಷ್ಮೀ ವಿಳಸಿತಮೆನೆ ದಿಟ್ಟಿಗೆ ಕೊಳು ಗುಳಮಂ ಪೋಲ್ದತ್ತು ಪೂಗೊಳಂ ಕೌರವನಾ॥೧೩॥
--------------
ರನ್ನ
ವಿನುತವಿರೋಧಿಮಂಡಳಿಕಮೌಳಿ ವಿರಾಜಿತ ಪಾದಪೀಠ ಕಾಂ ಚನಕಮಳಾಯಮಾನಮಿವು ನಿಮ್ಮಯ ಮೆಲ್ಲಡಿ ಭಿಂಡಿವಾಳದಂ ಬಿನ ಕರವಾಳ ಕಕ್ಕಡೆಯ ಕೊಂತದ ಧಾರೆಗಳುರ್ಚೆ ಸಂಯುಗಾ ವನಿತಳದೊಳ್ ವಿಧಾತ್ರವಶದಿಂ ನಿಮಗಂ ನಡೆವಂತುಟಾದುದೇ॥೧೮॥
--------------
ರನ್ನ
ಶರಸಂಧಾನಮನನ್ಯಸೈನ್ಯದೊಡಲೊಳ್ ಬಿಲ್ಬಲ್ಮೆಯಂ ತನ್ನ ಶಿ ಷ್ಯರ ಮೈಯೊಳ್ ನಿಜಕೀರ್ತಿಯಂ ನಿಖಿಳದಿಕ್ಚಕ್ರಂಗಳೊಳ್ ಚಿತ್ತಮಂ ಹರ ಪಾದಾಂಬುಜಯುಗ್ಮದೊಳ್ ನಿರಿಸಿದಂ ಚಾಪಾಗಮಾಚಾರ್ಯರೊಳ್ ದೊರೆಯಾರೆಂಬಿನಮಣ್ಮಿ ಸತ್ತಳವಿದೇಂ ದ್ರೋಣಂಗೆ ಮೈವೆತ್ತುದೋ॥೫೨॥
--------------
ರನ್ನ
ಶ್ರೀಯುವತೀಪ್ರಿಯಂ ಬಲಯುತಂ ಬಲಿದರ್ಪಹರಂ ಜಿತಾರಿದೈ ತೇಯನನಂತಭೋಗನಿಲಯಂ ಪ್ರತಿಪಾಲಿತಧರ್ಮಚಕ್ರನ ಬ್ಜಜಾಯತನೇತ್ರನಾದಿಪುರುಷಂ ಪುರುಷೋತ್ತಮನೀಚಳುಕ್ಯನಾ ರಾಯಣದೇವನೀಗೆಮಗೆ ಮಂಗಳಕಾರಣಮುತ್ಸವಂಗಳಂ
--------------
ರನ್ನ
ಸಭೆಯೊಳ್ ತಮ್ಮಯ ಪಕ್ಕದೆನ್ನನುಜನಾ ಪಾಂಚಾಲಿಯಂ ಪಂಚವ ಲ್ಲಭೆಯಂ ಮೋದೆಯುಮಲ್ಲಿ ಮಿಳ್ಮಿಳನೆ ನೋಡುತಿರ್ದ ಬಲ್ಲಾಳ್ಗಳಿ ಲ್ಲಿ ಭರಂಗೆಯ್ದಪರೀಪರಾಕ್ರಮಮುಮೀಪೆರ್ಮಾತುಮೀಗಂಡುಮೀ ಸುಭಟಾಲಾಪಮುಮೆಲ್ಲಮಾನೃಪತಿಗಳ್ಗೇನೆಂಬೆನೆಲ್ಲರ್ದುದೋ॥೩೬॥
--------------
ರನ್ನ
-->