ಒಟ್ಟು 238 ಕಡೆಗಳಲ್ಲಿ , 1 ಕವಿಗಳು , 123 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನುಂ ದುಶ್ಯಾಸನನುಂ ನೀನುಂ ಮೂವರೆ ದಲಾತನುಂ ಕಳಿದ ಬಳಿ ಕ್ಕಾನುಂ ನೀನೆ ದಲೀಗಳ್ ನೀನುಮಗಲ್ದೆತ್ತವೋದೆಯಂಗಾಧಿಪತಿ॥೧೧॥
--------------
ರನ್ನ
ಆಮ್ಮಗನೆನಾಗೆ ಧರ್ಮಜ ನೇಮ್ಮಗನಲ್ಲನೆ ಬಳಿಕ್ಕೆ ನೀಮುಂ ತಾಮುಂ ನಿಮ್ಮೊಳ್ ನೇರ್ಪಡುಗಿಡದೆ ಸು ಖಮ್ಮುನ್ನಿನ ತೆರದೆ ಬಾಳ್ವುದಾಂ ಬೆಸಕೆಯ್ಯೆಂ॥೧೨॥
--------------
ರನ್ನ
ಆರವಮಂನಿರ್ಜಿತಕಂ ಠೀರವರವಮಂ ನಿರಸ್ತಘನರವಮಂ ಕೋ ಪಾರುಣನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನುಲಗಪತಾಕಂ॥೨೨॥
--------------
ರನ್ನ
ಇಂದಾನಿದೆಂ ಮೇಣಿನ ನಂದನ ಕೇಳ್ ಪಾಂಡುತನಯರಾದರ್ ನಿನ್ನಂ ಕೊಂದುಂ ದುಶ್ಯಾಸನನಂ ಕೊಂದುಂ ಬರ್ದುಕುವರೆ ಬರ್ದುಕರಂಗಿಧಿಪತೀ॥೩೭॥
--------------
ರನ್ನ
ಇಡೆ ತೊಡೆಯನುಡಿದು ನೆಟ್ಟನೆ ಕೆಡೆಯುತ್ತುಂ ಕರ್ಚಿ ನೆಲನನಾನಿದನೆಂತುಂ ಬಿಡೆನೆಂಬ ತೆರದೆ ಕುಲಗಿರಿ ಕೆಡೆವಂದದೆ ಕೌರವೇಂದ್ರನಾಗಳ್ ಕೆಡೆದಂ॥೩೭॥
--------------
ರನ್ನ
ಇದರೊಳ್ ಮೂರ್ಧಾಭಿಷಿಕ್ತರ್ ಮಣಿಮಕುಟಧರರ್ ಕೃಷ್ಣೆ ಬಾಹಾಬಳಾಗ್ರ್ಯರ್ ಕದನಪ್ರೋಚ್ಚಂಡದಂಡಕ್ರಮವಿಜಿತರಿಪುಕ್ಷತ್ರಿಯರ್ ವೀರಲಕ್ಷ್ಮೀ ಸದನರ್ಸೋಮಾಮೃತಾಸ್ವಾದನಶುಚಿವದನರ್ ಮುನ್ಮಳ್ಕಾಡಿದರ್ ನೋ ಡಿದು ನಿನ್ನೀ ಕೇಶಪಾಶಂ ಕುರುಕುಲಪತಿಗಾಯ್ತಲ್ತೆ ಕೀನಾಶಪಾಶಂ॥೪೯॥
--------------
ರನ್ನ
ಇನಸುತನಿರವಂ ದುಶ್ಯಾ ಸನನಿರವಂ ಕಂಡುಮಿನ್ನುಮೆನ್ನಸುವಿದು ನೆ ಟ್ಟನೆ ಪೋದುದಿಲ್ಲ ಕಲ್ಲೆರ್ದೆ ತನದಿಂದೆನ್ನಂತು ಬರ್ದನಾವನುಮೊಳನೇ॥೨೮॥
--------------
ರನ್ನ
ಇನಿಸಿನಿಸುತಿಂಬೆವೊರ್ಮೆಯೆ ತಿನೆ ತವುಗುಮಿದೆಂದು ತಾಯುಮಾನೆಯ ಪೆಣನಂ ತಿನಲಾರದೆ ಪೆರರ್ಗಿಕ್ಕದೆ ಮನಮಂ ಪಸುತಿರ್ದುವಲ್ಲಿ ಲೋಭಿಮರುಳ್ಗಳ್॥೩೮॥
--------------
ರನ್ನ
ಇಭಶೈಲಂಗಳನೇರಿಯೇರಿ ರುಧಿರಸ್ರೋತಂಗಳಂ ದಾಂಟಿದಾಂ ಟಿಭದೋರನೀಲಲತಾ ಪ್ರತಾನವಿಪಿನ ವ್ರಾತಂಗಳೊಳ್ ಸಿಲ್ಕಿ ಸಿ ಲ್ಕಿ ಭರಂಗೆಯ್ದುರದೆಯ್ದಿ ಸಂಜಯ ಶಿರಸ್ಕಂಧಾವಲಂಬಂ ಕುರು ಪ್ರಭು ಕಂಡಂ ಶಲಜಾಲಜರ್ಜರಿತ ಗಾತ್ರತ್ರಾಣನಂ ದ್ರೋಣನಂ॥೪೮॥
--------------
ರನ್ನ
ಇರಲಿಂತೀಮಾದ್ರಿಪುತ್ರರ್ ಬಡವುಗಳವರೇಗೆಯ್ವರಿಂ ಧರ್ಮಪುತ್ರಂ ಬೆರಸೀಗಳ್ ಬರ್ಕೆ ಭೀಮಂ ಹರಿಸುತನೊಡನೀ ಮೂವರುಂ ಬರ್ಕೆ ಮೇಣ ಯ್ವರುಮಿಂಬರ್ಕೀ ಕೃತಾಂತಾತ್ಮಜಪವನಜಗಾಂಡೀವಧನ್ವರ್ಕಳೀಮೂ ವರೊಳೊರ್ವಂ ಕೃಷ್ಣ ಬರ್ಕಿಂ ಪೊಣರಲನಿಬರುಂ ಬರ್ಕೆ ಮೇಣ್ ಬನ್ನಮೀವೆಂ॥೪೨॥
--------------
ರನ್ನ
ಇರಿಯೆಂ ಬಿಳ್ದನನೆಂಬೀ ಬಿರುಬಿಂದಂ ಬೀಸೆ ಗದೆಯ ಗಾಳಿಯ ಕೋಳೆ ಳ್ಚರಿಸಿದುದು ಭೀಮನಂ ಮೆ ಯ್ಮರೆದವನಂ ತಂದೆ ಸುತರ್ಗೆ ಕೂರದರೊಳರೇ॥೩೨॥
--------------
ರನ್ನ
ಈ ದೊರೆಯರಮಗನುಂ ಮೃಷ ವಾದಂ ನೋಡೆಂದು ಧರ್ಮನಂ ಮೂದಲಿಸಲ್ ಪೋದಂ ಪುತ್ರನನಲಸಲ್ ಪೋದನೆ ಯಮಪುರಕೆ ಮುಕ್ಥಬಾಣಂ ದ್ರೋಣಂ॥೨೫॥
--------------
ರನ್ನ
ಈಯಲಿರಿಯಲ್ ಶರಣ್ಬುಗೆ ಕಾಯಲ್ ಕ್ಷತ್ರಿಯರೆ ಬಲ್ಲರಬ್ರಹ್ಮಣ್ಯಂ ಭೋಯೆನಲುಂ ಬ್ರಾಹ್ಮಣರವಿ ಧಾಯೆನಲುಂ ಬಲ್ಲರಿರಿರಲವರೆಂತರಿವರ್॥೧೬॥,
--------------
ರನ್ನ
ಈಯೆರಡುಮೆನ್ನ ನಿಡುದೋ ಳಾಯತ್ತಂ ವೀರವೃತ್ತಿ ಜಯಮೆಂಬುದು ದೈ ವಾಯತ್ತಮಜ್ಜ ಭರತಾ ನ್ವಾಯಕ್ಕೆ ಕಲಂಕಮಾಗದಂತಿರೆ ನೆಗಳ್ವೆಂ॥೪॥
--------------
ರನ್ನ
ಎತ್ತುವೆನೊ ಮಂದರಾದ್ರಿಯ ನೊತ್ತುವೆನೊ ರಸಾತಳಕ್ಕೆ ನೆಲನಂ ದೆಸೆಯಂ ಪತ್ತುವೆನೊ ಪಗೆಯ ಬೆನ್ನಂ ಪತ್ತುವೆನೊ ದಿಶಾಗಜಂಗಳಂ ತುತ್ತುವೆನೊ॥೧೮॥
--------------
ರನ್ನ
-->