ಒಟ್ಟು 48 ಕಡೆಗಳಲ್ಲಿ , 1 ಕವಿಗಳು , 40 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನವಭೂತಭಾಷೆಯಿಂ ಕುರುಪುವೇಳ್ದು ತಾಮಡ್ಡಗವಿತೆಯಂ ಮಾಡಿ ಮಹಾವ್ಯವಸಾಯಂಗೆಯ್ವ ಮರುಳ್ಗವಿಗಳ್ ತಾವೇಂ ಗುಣಾಢ್ಯರಂ ಮಸುಳಿಸರೇ॥೪೨॥
ಪದಘಾತಕ್ಕಗಿದಳ್ಕಿ ಬಳ್ಕಿದುದಧೋಲೋಕಂ ಭಯಂಮರ್ತ್ಯಲೋಕದೊಳಂ ಪೊಣ್ಮಿದುದೂರ್ಧ್ವಲೋಕದೊಳೆ ಮತ್ತಾಯ್ತದ್ಭುತಭ್ರಾಂತಿಯೆಂಬುದನೆಂಬಂತಿರೆಯಂತದೇಂ ಭುವನಂ ಪರ್ಯಾಕುಲಂ ಮಾಡಲಾರ್ತುದೊ ದುರ್ಯೋಧನಭೀಮಸೇನರ ಗದಾಯುದ್ಧಂ ತ್ರಿಧಾಭ್ರಾಂತಿಯಂ॥೧೦॥
ಪುದುವಾಳಲ್ಕಣಮಾಗದೆಂತುಮವರೊಳ್ ಸಂಧಾನಮಂ ಮಿಡಲಾಗದು ನೀಮಿಲ್ಲದೇಯಜ್ಜ ಬಿಲ್ಲಗುರುಗಳ್ ತಾಮಿಲ್ಲದಾ ಕರ್ಣನಿಲ್ಲದೆ ದುಶ್ಯಾಸನನಿಲ್ಲದಾರೊಡನೆ ರಾಜ್ಯಂಗೆಯ್ವೆನಾರ್ಗೆನ್ನ ಸಂಪದಮಂ ತೋರುವೆನಾರ್ಗೆತೋರಿ ಮೆರೆವೆಂ ನಾನಾ ವಿನೋದಂಗಳಂ॥೫೨॥
ಬಲವದ್ವೈರಿತಮೋಹರಾತಿಪಟುಗಳ್ ಪದ್ಮಾಸನಸ್ಪರ್ಶಸಲ್ಲಲಿತಂಗಳ್ ಜಿತಚಕ್ರವಾಕನಿವಹಪ್ರೇಮಾಹವಂಗಳ್ ಮಹೀವಲಯೋದ್ದ್ಯೋತಕರಂಗಳಾನತ ಜನಕ್ಕಾನಂದಮಂ ಮಾಳ್ಕ ಮಂಗಲಮುಚ್ಚಂಡಕರಂ ಮಹೀವಲಯದೊಳ್ ಚಾಳುಕ್ಯಮಾರ್ತಾಂಡನಾ
ಭರತಾನ್ವಾಯದೋಳಂದಿನಿಂದುವರೆಗಂ ಸಾಪತ್ನರೊಳ್ ಬದ್ಧಮತ್ಸರಮಿಲ್ಲೆಮ್ಮನಕಾರಣಂ ಕದಡಿದಯ್ ಸಾವೆಯ್ದಿದಯ್ ನಷ್ಟಸೋದರಮಾದತ್ತೆನಗಂ ಸ್ವಗೋತ್ರವಧೆಯಪ್ಪಾಪಾತಕಂ ಕೌರವೇಶ್ವರ ನೀಂ ಸಂಧಿಗೊಡಂಬಡಿಂತು ಕೊಳನಂ ಪೊಕ್ಕಿರ್ದುದೇಂ ತಕ್ಕುದೇ॥೯॥
ಮಲುದಾತ್ಮಜ ನಿಜರಿಪು ತಲೆಗರೆದಿರ್ದಪನಿಲ್ಲಿ ನೋಡು ಕೊಳದೊಳಗೆಂಬಂತಿರೆ ಪೊಳೆದು ತೋರ್ಪ ಜಲಚರಪರಿಕರಮರಿಪಿದುವು ತಾಮೆ ದುರ್ಯೋಧನನಂ॥೪೬॥
ಮುಳಿದಾಂಪರ್ ಧರಣೀಶ್ವರರ್ ಮಿಗೆ ಪೆರರ್ ಬಿಲ್ಗೊಂಡುಮೇಗೆಯ್ವರೆನ್ನೊಳಮಿಂ ತೀರದ ಕಾರ್ಯಭರಮಂ ತೀರ್ಚಲ್ ಪೆರರ್ ಗಂಡರಿನ್ನೊಳರೇ ಪಾಂಡವರೆಂಬರೇಗಹನಮೆಂಬಾದರ್ಪದಂತಾಜಿಯೊಳ್ಸುಳರಂಬೆತ್ತಿರೆ ಸತ್ತರೆನ್ನಿನಿಬರುಂ ತಮ್ಮಂದಿರುಂ ಮಕ್ಕಳುಂ ॥೧೨॥
ಯಮವಾಯುತ್ರಿದಶಾಶ್ವಿನನೀತನಯರುಂ ತಾವಾದರೀಯಯ್ವರುಂಹಿಮಕೃದ್ವಂಶಕಳಂಕರಂತವರ್ಗಮಾ ಪಾಂಚಾಲ ಭೂಪಾಲ ಪುತ್ರಿಮನೋವಲ್ಲಭೆಯಾದಳೆಂದೊಡೆ ಗಡಂ ಕೇಳಲ್ಕದೇಂ ಕ್ಷತ್ರಧರ್ಮಮೊ ಭೂಲೋಕಕೆ ಪೇಳಿಮೀ ದೊರೆಯ ಚಾರಿತ್ರಂ ಪೃಥಾಪುತ್ರರಾ॥೩೭॥
ಶ್ರೀಯುವತೀಪ್ರಿಯಂ ಬಲಯುತಂ ಬಲಿದರ್ಪಹರಂ ಜಿತಾರಿದೈತೇಯನನಂತಭೋಗನಿಲಯಂ ಪ್ರತಿಪಾಲಿತಧರ್ಮಚಕ್ರನಬ್ಜಜಾಯತನೇತ್ರನಾದಿಪುರುಷಂ ಪುರುಷೋತ್ತಮನೀಚಳುಕ್ಯನಾರಾಯಣದೇವನೀಗೆಮಗೆ ಮಂಗಳಕಾರಣಮುತ್ಸವಂಗಳಂ
ಹರಿಸಂಧಾನಕ್ಕೆ ವಂದಂದವಗಡಿಸಿದಹಂಕಾರಮೇನಾಯ್ತೊ ಕೃಷ್ಣಾಂಬರಕೇಶಾಕೃಷ್ಟಿಯಂ ಮಾಡಿಸಿದ ಮದಮದೇನಾಯ್ತೊ ಕೌಂತೇಯರಂ ಮಚ್ಚರದಿಂ ಕಾಂತಾರದೊಳ್ ತಿರ್ರನೆ ತಿರಿಪಿದ ಸೊರ್ಕೀಗಳೇನಾದುದೆಂದಾಕುರುವಂಶಾಧೀಶನಂ ಮೂದಲಿಸಿದನದಟಂ ಭೀಮನುದ್ದಾಮಭೀಮಂ॥೧೪॥