ಒಟ್ಟು 95 ಕಡೆಗಳಲ್ಲಿ , 1 ಕವಿಗಳು , 64 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೊಣೆಯಿಂದಂ ತೆಗೆವಾಗಳೊಂದು ತುಡುವಾಗಳ್ ಪತ್ತುಬಾಣಂ ಧನು ರ್ಗುಣದಿಂದಂ ಬಿಡುವಲ್ಲಿ ನೂರು ಪರಿವಾಗಳ್ ಸಾಸಿರಂ ವೈರಿಮಾ ರ್ಗಣಮಂ ಛೇದಿಸುವಲ್ಲಿ ಲಕ್ಕೆ ನಡುವಾಗಳ್ ಕೋಟಿ ಸೇನಾಂಗದೊಳ್ ಗಣನಾತೀತಮಿದೆಂದೊಡೇವೊಗಳ್ವುದೋ ಬಿಲ್ಬಲ್ಮೆಯಂ ಪಾರ್ಥನಾ॥೩॥
--------------
ರನ್ನ
ಧಾರಿಣಿಯೊಳ್ ನಿಜಸಂಯುಗ ಭಾರಮನಾಂತಿರ್ದ ವೀರಪುಂಗವರಿರೆ ತ ದ್ಭಾಲಮನಾಂತಭಿಮನ್ಯು ಕು ಮಾರಂ ಪುಗೆ ವೀರರಮಣನೆನಿಸಿದನಲ್ತೆ॥೫೮॥
--------------
ರನ್ನ
ಧೃತರಾಷ್ಟ್ರಂ ದ್ರುಮಮಾದುದು ಶತಶಾಖಂ ಪಂಚಶಾಖಮಾದುದು ಪಾಂಡು ಕ್ಷಿತಿರುಹಮಕ್ಷಯಮಾಯ್ತಾ ದ್ವಿತೀಯಮಾಯ್ತೇಕಶಾಖಮಿವನಿಂದಾದ್ಯಂ॥೨೯॥
--------------
ರನ್ನ
ನಯನದೊಳಮೆರ್ದೆಯೊಳಂ ನಿ ನ್ನಯ ರೂಪಿರ್ದಪುದು ನಿನ್ನಮಾತಿರ್ದಪುದೆ ನ್ನಯ ಕಿವಿಯೊಳಗಿನನಂದನ ವಿಯೋಗಮೆಂತಾದುದರಿಯೆನಂಗಾಧಿಪತೀ॥೨೪॥
--------------
ರನ್ನ
ನವಭೂತಭಾಷೆಯಿಂ ಕುರು ಪುವೇಳ್ದು ತಾಮಡ್ಡಗವಿತೆಯಂ ಮಾಡಿ ಮಹಾ ವ್ಯವಸಾಯಂಗೆಯ್ವ ಮರು ಳ್ಗವಿಗಳ್ ತಾವೇಂ ಗುಣಾಢ್ಯರಂ ಮಸುಳಿಸರೇ॥೪೨॥
--------------
ರನ್ನ
ನಿಜಜೀವಂ ಪರಲೋಕದೊಳ್ ನಿಜಮಹಾಮಾಂಸಂ ಪಿಶಾಚಾಸ್ಯದೊಳ್ ನಿಜರಕ್ತಂ ರಿಪುಕುಕ್ಷಿಯೊಳ್ ನಿಜಶಿರಂ ನಕ್ತಂಚರೀ ಹಸ್ತದೊಳ ನಿಜಕಾಯಂ ಕುರುಭೂಮಿಯೊಳ್ ನೆಲಸೆ ಗಾಂಧಾರೀಜ ದುರ್ಯೋಧನಾ ನುಜ ದುಶ್ಯಾಸನ ಭೀಮ ಭೀಮಗದೆಯಿಂ ಪಂಚತ್ವಮಂ ಪೋರ್ದಿದಯ್॥೫॥
--------------
ರನ್ನ
ನಿನ್ನಂ ಕೊಂದಂ ಗಡಮೊಳ ನಿನ್ನುಂ ಕೊಂದವನನಿಕ್ಟಿ ಕೊಲ್ಲದೆ ಮಾಣ್ಬಾ ನಿನ್ನುಮೊಳೆಂ ಗಡಿದಕ್ಕುಮೆ ನಿನ್ನಯ ಕೂರ್ಮೆಗಮದೆನ್ನ ಸೌಧರ್ಮಿಕೆಗಂ॥೬॥
--------------
ರನ್ನ
ನಿಮಗೆ ಪೊಡಮಟ್ಟು ಪೋಪೀ ಸಮಕಟ್ಟಿಂ ಬಂದೆನಹಿತರೊಳ್ ಸಂಧಿಯನೇಂ ಸಮಕೊಳಿಸಲೆಂದು ಬಂದೆನೆ ಸಮರದೊಳೆನಗಜ್ಜ ಪೇಳಿಮಾವುದು ಕಜ್ಜಂ॥೪೫॥
--------------
ರನ್ನ
ನೀನಿಲ್ಲದರಸುಗೆಯ್ವೆನೆ ನೀನಿಲ್ಲದೆ ಬಾಳ್ವೆನೆಂದು ಬಗೆದಪ್ಪೆನೆ ಪೇಳ್ ನೀನಿಲ್ಲದಹಿತರೊಳ್ ಸಂ ಧಾನಂ ಮಾಡುವೆನೆ ಕೂಡೆನಂಗಾಧಿಪತಿ॥೧೨॥
--------------
ರನ್ನ
ನೆಗಳ್ದುದು ರಾಮಾಯಣಮುಂ ನೆಗಳ್ದುದು ಭಾರತಮುಮಾಮಹಾ ಕವಿಗಳಿನಾ ನೆಗಳ್ದರ್ ವ್ಯಾಸರ್ ವಾಲ್ಮೀ ಕಿಗಳೆನೆ ನೆಗಳ್ದುಭಯ ಕವಿಗಳೆಮಗಭಿವಂದ್ಯರ್
--------------
ರನ್ನ
ಪದಘಾತಕ್ಕಗಿದಳ್ಕಿ ಬಳ್ಕಿದುದಧೋಲೋಕಂ ಭಯಂಮರ್ತ್ಯಲೋ ಕದೊಳಂ ಪೊಣ್ಮಿದುದೂರ್ಧ್ವಲೋಕದೊಳೆ ಮತ್ತಾಯ್ತದ್ಭುತಭ್ರಾಂತಿಯೆಂ ಬುದನೆಂಬಂತಿರೆಯಂತದೇಂ ಭುವನಂ ಪರ್ಯಾಕುಲಂ ಮಾಡಲಾ ರ್ತುದೊ ದುರ್ಯೋಧನಭೀಮಸೇನರ ಗದಾಯುದ್ಧಂ ತ್ರಿಧಾಭ್ರಾಂತಿಯಂ॥೧೦॥
--------------
ರನ್ನ
ಪದುಳಂ ಕುಳ್ಳಿರ್ದೆಮಗಾ ಯದ ಮಾತಂ ತಗುಳೆ ಗಳಪಿ ಪೋದಂ ಸಂಧಿ ರ್ದದಟರೊಳಿರಿದರಿಯಂ ತ ಪ್ಪದೆ ಕಮ್ಮರಿಯೋಜನೆನಿಸಿದಂ ಬಿಲ್ಲೋಜಂ ॥೧೩॥
--------------
ರನ್ನ
ಪಸಿವಿನೊಳನ್ನಮಂ ಪಸಿದು ಬಂದವರ್ಗಿಕ್ಕುವ ಯುದ್ಧರಂಗದೊಳ್ ಕುಸಿಯದೆ ಸೂರೆಗೊಳ್ಳದೆ ರಣಕ್ಕೆ ಶುಚಿತ್ವಮನಪ್ಪುಕೆಯ್ವ ಮಾ ನಸಿಕೆಯ ನಾಲ್ವರುಂ ನಮಗೆ ವಂದ್ಯರವಂದೀರೊಳೀತನಲ್ತೆ ಸಾ ಹಸಧನನೆಂದು ಕೆಯ್ಮುಗಿದನಂದಭಿಮನ್ಯುಗೆ ಕೌರವೇಶ್ವರಂ॥೬೦॥
--------------
ರನ್ನ
ಪುದುವಾಳಲ್ಕಣಮಾಗದೆಂತುಮವರೊಳ್ ಸಂಧಾನಮಂ ಮಿಡಲಾ ಗದು ನೀಮಿಲ್ಲದೇಯಜ್ಜ ಬಿಲ್ಲಗುರುಗಳ್ ತಾಮಿಲ್ಲದಾ ಕರ್ಣನಿ ಲ್ಲದೆ ದುಶ್ಯಾಸನನಿಲ್ಲದಾರೊಡನೆ ರಾಜ್ಯಂಗೆಯ್ವೆನಾರ್ಗೆನ್ನ ಸಂ ಪದಮಂ ತೋರುವೆನಾರ್ಗೆತೋರಿ ಮೆರೆವೆಂ ನಾನಾ ವಿನೋದಂಗಳಂ॥೫೨॥
--------------
ರನ್ನ
ಪುರುಷರ್ ಮೂವರೊಳೊರ್ವನೆಂಬರಸುರಪ್ರಧ್ವಂಸಿಯೆಂಬರ್ ಜಗ ದ್ಗುರುವೆಂಬರ್ ಪೆರರ್ಗೇಕೆ ತೇರನೆಸಪಂ ಧರ್ಮಾನುಜಂಗೇಕೆ ಕಿಂ ಕರನಾದಂ ಕರವೇರಿಯಾದನದರಿಂ ಸೂತಂ ಭಟಂ ಪೇಳಿ ಯೆಂ ಬರಮಾತೊಪ್ಪುಗುಮಾದಿ ದೇವನೆನಿಸಲ್ ಕೃಷ್ಣಂಗದೆಂತೊಪ್ಪುಗುಂ॥೪೩॥
--------------
ರನ್ನ
-->