ಒಟ್ಟು 72 ಕಡೆಗಳಲ್ಲಿ , 1 ಕವಿಗಳು , 56 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೀರಿದ ಪಗೆವನ ಪಟ್ಟಂ ಪಾರಿಸುವೆನೊ ಮುನ್ನಮಮರುಂಡಮೃತಮನೇಂ ಕಾರಿಸುವೆನೊ ಖಚರರನಡ ರ್ದೇರಿಸುವೆನೊ ಮೇರುಗಿರಿರ ತೂರಲ ತುದಿಯಂ॥೧೭॥
--------------
ರನ್ನ
ಮುಳಿದಾಂಪರ್ ಧರಣೀಶ್ವರರ್ ಮಿಗೆ ಪೆರರ್ ಬಿಲ್ಗೊಂಡುಮೇಗೆಯ್ವರೆ ನ್ನೊಳಮಿಂ ತೀರದ ಕಾರ್ಯಭರಮಂ ತೀರ್ಚಲ್ ಪೆರರ್ ಗಂಡರಿ ನ್ನೊಳರೇ ಪಾಂಡವರೆಂಬರೇಗಹನಮೆಂಬಾದರ್ಪದಂತಾಜಿಯೊಳ್ ಸುಳರಂಬೆತ್ತಿರೆ ಸತ್ತರೆನ್ನಿನಿಬರುಂ ತಮ್ಮಂದಿರುಂ ಮಕ್ಕಳುಂ ॥೧೨॥
--------------
ರನ್ನ
ಮುಳಿಸಿಂ ನಂಜಕ್ಕಿಕೊಂದಂದಿನ ಜತುಗೃಹದೊಳ್ ಸುಟ್ಟುಕೊಂದಂದಿನುರ್ವೀ ತಳಮಂ ಜೂದಾಡಿ ಗೆಲ್ದಂದಿನ ನಿಜಕಬರೀನೀವಿಬಂಧಂಗಳಂ ದೋ ರ್ವಳದಿಂದಂ ತಮ್ಮನಿಂದಂ ತೆಗೆಯಿಸಿ ನಡೆದಾ ನೀಚನಾ ದ್ರೋಹನಾ ಸಂ ಚಳನಾ ಚಂಡಾಲನಾ ಪಾತಕನಿರವನಿದಂ ನೋಡು ಪಂಕೇಜವಕ್ತ್ರೇ॥೪೫॥
--------------
ರನ್ನ
ಯಮವಾಯುತ್ರಿದಶಾಶ್ವಿನನೀತನಯರುಂ ತಾವಾದರೀಯಯ್ವರುಂ ಹಿಮಕೃದ್ವಂಶಕಳಂಕರಂತವರ್ಗಮಾ ಪಾಂಚಾಲ ಭೂಪಾಲ ಪು ತ್ರಿಮನೋವಲ್ಲಭೆಯಾದಳೆಂದೊಡೆ ಗಡಂ ಕೇಳಲ್ಕದೇಂ ಕ್ಷತ್ರಧ ರ್ಮಮೊ ಭೂಲೋಕಕೆ ಪೇಳಿಮೀ ದೊರೆಯ ಚಾರಿತ್ರಂ ಪೃಥಾಪುತ್ರರಾ॥೩೭॥
--------------
ರನ್ನ
ವಿನುತವಿರೋಧಿಮಂಡಳಿಕಮೌಳಿ ವಿರಾಜಿತ ಪಾದಪೀಠ ಕಾಂ ಚನಕಮಳಾಯಮಾನಮಿವು ನಿಮ್ಮಯ ಮೆಲ್ಲಡಿ ಭಿಂಡಿವಾಳದಂ ಬಿನ ಕರವಾಳ ಕಕ್ಕಡೆಯ ಕೊಂತದ ಧಾರೆಗಳುರ್ಚೆ ಸಂಯುಗಾ ವನಿತಳದೊಳ್ ವಿಧಾತ್ರವಶದಿಂ ನಿಮಗಂ ನಡೆವಂತುಟಾದುದೇ॥೧೮॥
--------------
ರನ್ನ
ಶರಸಂಧಾನಮನನ್ಯಸೈನ್ಯದೊಡಲೊಳ್ ಬಿಲ್ಬಲ್ಮೆಯಂ ತನ್ನ ಶಿ ಷ್ಯರ ಮೈಯೊಳ್ ನಿಜಕೀರ್ತಿಯಂ ನಿಖಿಳದಿಕ್ಚಕ್ರಂಗಳೊಳ್ ಚಿತ್ತಮಂ ಹರ ಪಾದಾಂಬುಜಯುಗ್ಮದೊಳ್ ನಿರಿಸಿದಂ ಚಾಪಾಗಮಾಚಾರ್ಯರೊಳ್ ದೊರೆಯಾರೆಂಬಿನಮಣ್ಮಿ ಸತ್ತಳವಿದೇಂ ದ್ರೋಣಂಗೆ ಮೈವೆತ್ತುದೋ॥೫೨॥
--------------
ರನ್ನ
ಶ್ರೀಯುವತೀಪ್ರಿಯಂ ಬಲಯುತಂ ಬಲಿದರ್ಪಹರಂ ಜಿತಾರಿದೈ ತೇಯನನಂತಭೋಗನಿಲಯಂ ಪ್ರತಿಪಾಲಿತಧರ್ಮಚಕ್ರನ ಬ್ಜಜಾಯತನೇತ್ರನಾದಿಪುರುಷಂ ಪುರುಷೋತ್ತಮನೀಚಳುಕ್ಯನಾ ರಾಯಣದೇವನೀಗೆಮಗೆ ಮಂಗಳಕಾರಣಮುತ್ಸವಂಗಳಂ
--------------
ರನ್ನ
ಸಭೆಯೊಳ್ ತಮ್ಮಯ ಪಕ್ಕದೆನ್ನನುಜನಾ ಪಾಂಚಾಲಿಯಂ ಪಂಚವ ಲ್ಲಭೆಯಂ ಮೋದೆಯುಮಲ್ಲಿ ಮಿಳ್ಮಿಳನೆ ನೋಡುತಿರ್ದ ಬಲ್ಲಾಳ್ಗಳಿ ಲ್ಲಿ ಭರಂಗೆಯ್ದಪರೀಪರಾಕ್ರಮಮುಮೀಪೆರ್ಮಾತುಮೀಗಂಡುಮೀ ಸುಭಟಾಲಾಪಮುಮೆಲ್ಲಮಾನೃಪತಿಗಳ್ಗೇನೆಂಬೆನೆಲ್ಲರ್ದುದೋ॥೩೬॥
--------------
ರನ್ನ
ಸೂನುಗಳಳಿವಂ ಪ್ರಿಯಮಿ ತ್ರಾನುಜರರಿವಂ ವಿಧಾತ್ರ ನೀಂ ಕಾಣಿಸಿ ಮುಂ ದೇನಂ ಕಾಣಿಸಲಿರ್ದಪೆ ನೀನೆನ್ನಂ ಪಾಪಕರ್ಮನಂ ನಿರ್ಗುಣನಂ॥೨೯॥
--------------
ರನ್ನ
ಸೊಕಮಿರ್ಕಕ್ಕಟ ದರ್ಭಪಾಣಿ ಯಮಜಂ ದರ್ವೀಕರ ವಾಯುಪು ತ್ರಕನುಂ ಜರ್ಜರಹಸ್ತನಿಂದ್ರತನಯಂ ದಸ್ರಾತ್ಮಜರ್ ದಂಡಮು ಷ್ಟಿಕರರ್ ಶಸ್ತ್ರವಿಡಂಬಮೇವುದವರ್ಗೆ ಪಾಂಚಾಲಿಯುಂ ಗಂಧದಾ ಯಕಿಯಾಗಿರ್ಪಿನಮಂದು ಮತ್ಸ್ಯಗೃಹದಿಂದೀನಿಗ್ರಹಂ ಪೊಲ್ಲದೇ॥೩೪॥
--------------
ರನ್ನ
ಸ್ಥಿರಸತ್ಯವ್ರತಿಯೆಂದು ಧರ್ಮರುಚಿಯೆಂದಾ ಧರ್ಮಪುತ್ರಂ ದಯಾ ಪರನೆಂದೆಲ್ಲರ ಪೇಳ್ದ ಮಾತು ಪುಸಿಯಾಯ್ತೀ ಕಾರ್ಮುಕಾಚಾರ್ಯನಂ ಗುರುವಂ ಬ್ರಾಹ್ಮಣನಂ ತೊದಳ್ನುಡಿದು ಕೊಂದದಾ ಮೃಷಾಪಾತಕಂ ಪರಮೆಂಬೀ ನುಡಿಯಿಂ ಪೃಥಾಪ್ರಿಯಸುತಂ ಪಾಪಕ್ಕೆ ಪಕ್ಕಾಗನೇ॥೨೩॥
--------------
ರನ್ನ
-->