ಒಟ್ಟು 238 ಕಡೆಗಳಲ್ಲಿ , 1 ಕವಿಗಳು , 123 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸ್ಥಿರಸತ್ಯವ್ರತಿಯೆಂದು ಧರ್ಮರುಚಿಯೆಂದಾ ಧರ್ಮಪುತ್ರಂ ದಯಾಪರನೆಂದೆಲ್ಲರ ಪೇಳ್ದ ಮಾತು ಪುಸಿಯಾಯ್ತೀ ಕಾರ್ಮುಕಾಚಾರ್ಯನಂಗುರುವಂ ಬ್ರಾಹ್ಮಣನಂ ತೊದಳ್ನುಡಿದು ಕೊಂದದಾ ಮೃಷಾಪಾತಕಂಪರಮೆಂಬೀ ನುಡಿಯಿಂ ಪೃಥಾಪ್ರಿಯಸುತಂ ಪಾಪಕ್ಕೆ ಪಕ್ಕಾಗನೇ॥೨೩॥
ಹರಿ ಬೇಡೆ ಕವಚಮಂ ನೀನರಿದಿತ್ತಯ್ ಕೊಂತಿ ಬೇಡೆ ಬೆಚ್ಚದೆ ಕೊಟ್ಟಯ್ಪುರಿಗಣೆಯಂ ನಿನಗೆಣೆ ಕಸವರಗಲಿ ಮೆಯ್ಗಲಿಯುಮಾವನಂಗಾಧಿಪತಿ॥೩೩॥
ಹರಿಸಂಧಾನಕ್ಕೆ ವಂದಂದವಗಡಿಸಿದಹಂಕಾರಮೇನಾಯ್ತೊ ಕೃಷ್ಣಾಂಬರಕೇಶಾಕೃಷ್ಟಿಯಂ ಮಾಡಿಸಿದ ಮದಮದೇನಾಯ್ತೊ ಕೌಂತೇಯರಂ ಮಚ್ಚರದಿಂ ಕಾಂತಾರದೊಳ್ ತಿರ್ರನೆ ತಿರಿಪಿದ ಸೊರ್ಕೀಗಳೇನಾದುದೆಂದಾಕುರುವಂಶಾಧೀಶನಂ ಮೂದಲಿಸಿದನದಟಂ ಭೀಮನುದ್ದಾಮಭೀಮಂ॥೧೪॥