ಒಟ್ಟು 8 ಕಡೆಗಳಲ್ಲಿ , 1 ಕವಿಗಳು , 8 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಸುಹೃತ್ಸೇನೆಗೆ ಸಾಲ್ವನೊರ್ವನೆ ಗಡಂ ಲುದ್ರಾವತಾರಂ ಗಡಂನೊಸಲೊಳ್ ಕಣ್ಗಡಮೆಂದು ನಚ್ಚಿ ಪೊರೆದೆಂ ತಾನಕ್ಕೆ ತಮ್ಮಮ್ಮನಕ್ಕಿಸಲಂಬಂ ತಿರುವಾಯ್ಗೆ ತಂದರಿವರೇ ತಾಮಿರ್ವರುಂ ಕಯ್ದುವಂಬಿಸುಟರ್ ಜೋಳದ ಪಾಳಿಯಂ ಬಗೆದರಿಲ್ಲಾದ್ರೌಣಿಯುಂ ದ್ರೋಣನುಂ
ಇದು ಲಾಕ್ಷಾಗೇಹದಾಹಕ್ಕಿದು ವಿಷಮವಿಷಾನ್ನಕ್ಕಿದಾ ನಾಡ ಜೂದಿಂಗಿದು ಪಾಂಚಾಲೀಪ್ರಪಂಚಕ್ಕಿದು ಕೃತಕಸಭಾಲೋಕನಭ್ರಾಂತಿಗೆಂದೋವದೆ ಪೊಯ್ದಂ ತೋಳ್ಗ಼ಳನಗಲ್ದುರಮಂ ಕೆನ್ನೆಯಂ ನೆತ್ತಿಯಂ ಕೋಪದೊಳಯ್ದಂ ದುರ್ನಯಕ್ಕಯ್ದೆಡೆಯನುರು ಗದಾದಂಡದಿಂ ಭೀಮಸೇನಂ॥೧೯॥
ಉಡಿದಿರ್ದ ಕಯ್ದು ನೆತ್ತರಕಡಲೊಳಗಡಿಗಡಿಗೆ ತಳಮನುರ್ಚುತ್ಥಿರೆ ಕಾಲಿಡಲೆಡೆವಡೆಯದೆ ಕುರುಪತಿದಡಿಗವೆಣಂಗಳನೆ ಮೆಟ್ಟಿ ನಡೆಯುತ್ತಿರ್ದಂ॥೧೪॥
ಕಾರ್ಯಸಖಂ ಶಕುನಿ ಗಡಾಶೌರ್ಯಸಖಂ ಸೂತಜಂ ಗಡಾ ಭೀಷ್ಮ ಶರಾಚಾರ್ಯರ ನುಡಿ ಕಯ್ಪೆ ಗಡಮಕಾರ್ಯಂಗಹಿಕೇತನಂಗೆ ವಿಧಿವಿಳಸನದಿಂ॥೨೭॥
ಜಳದೊಳ್ ಮೀನಿರ್ಪವೊಲ್ ನೀಂ ಕೊಳದೊಳೆ ಮುಳುಗಿರ್ದಕಟಾ ಕೋಡಸೇಡಿಂಗೊಳಗಾದಯ್ ನಿನ್ನ ದುರ್ಯೋಧನವೆಸರ್ಗಿದು ಲಜ್ಜಾಕರಂ ತೋರಿದಯ್ ನಿನ್ನಳವಂ ಚಿಃ ಸತ್ತರೇಂ ಪುಟ್ಟರೆ ಪೊರಮಡು ನೀಂ ಕಯ್ದುಗೊಳ್ ಕೌರವೇಂದ್ರಾಚಳವಜ್ರಂ ಬಂದನೀಗಳ್ ಕುರುಕುಲಮಥನೋದ್ಭೀಕರಂ ಭೀಮಸೇನಂ॥೧೩॥
ತಪನಸುತಂ ಬೇರಾಂ ಬೇರೆ ಪೊಲ್ಲದಂ ನುಡಿದನಾವಗಂ ರಕ್ಷಿಪ ಕಯ್ದುವನೆನಲಾ ಮರೆಯಪಾಂಡವಂ ಬಗೆದು ನೋಳ್ಪೊಡಶ್ವತ್ಥಾಮಂ॥೨೦॥
ತರಣಿತನಯಾನನೇಂದುಸ್ಮರಣದೆ ಕಯ್ಗಣ್ಮುವೆನ್ನ ಶೋಕಮಹಾಸಾಗರಮಂ ತವೆಪೀರ್ದುದು ಭೀಕರಮತ್ಕೋಪಾಗ್ನಿ ಬಾಡಬಾಗ್ನಿ ತೆರದಿಂ॥೩೭॥
ಪೆಂಡಿರ್ ಪಳಯಿಸುವಂದದೆಗಂಡರ್ ಪಳಯಿಸಿದೊಡಾಯಮಂ ಛಲಮಂ ಕಯ್ಕೊಂಡೆಸೆಪರಾರೊ ಕುರುಕುಲಮಂಡನ ನೀನೆತ್ತಿಕೊಂಡ ಛಲಮನೆ ಮೆರೆಯಾ॥೩೩॥