ಒಟ್ಟು 3 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಲಾಕ್ಷಾಗೇಹದಾಹಕ್ಕಿದು ವಿಷಮವಿಷಾನ್ನಕ್ಕಿದಾ ನಾಡ ಜೂದಿಂ ಗಿದು ಪಾಂಚಾಲೀಪ್ರಪಂಚಕ್ಕಿದು ಕೃತಕಸಭಾಲೋಕನಭ್ರಾಂತಿಗೆಂದೋ ವದೆ ಪೊಯ್ದಂ ತೋಳ್ಗ಼ಳನಗಲ್ದುರಮಂ ಕೆನ್ನೆಯಂ ನೆತ್ತಿಯಂ ಕೋ ಪದೊಳಯ್ದಂ ದುರ್ನಯಕ್ಕಯ್ದೆಡೆಯನುರು ಗದಾದಂಡದಿಂ ಭೀಮಸೇನಂ॥೧೯॥
--------------
ರನ್ನ
ಕಸವರಮಂ ದ್ವಿಜದಾನಕೆ ಪೂಸಜೌವನಮಂ ಸ್ವದಾರ ಸಂತೋಷಕೆ ನಿ ನ್ನಸುವಂ ಪತಿಕಾರ್ಯಕೆ ವೆ ಚ್ಚಿಸಿದಯ್ ನಿನ್ನನ್ನನಾವನಂಗಾಧಿಪತಿ॥೨೨॥
--------------
ರನ್ನ
ಹರಿ ಬೇಡೆ ಕವಚಮಂ ನೀ ನರಿದಿತ್ತಯ್ ಕೊಂತಿ ಬೇಡೆ ಬೆಚ್ಚದೆ ಕೊಟ್ಟಯ್ ಪುರಿಗಣೆಯಂ ನಿನಗೆಣೆ ಕಸ ವರಗಲಿ ಮೆಯ್ಗಲಿಯುಮಾವನಂಗಾಧಿಪತಿ॥೩೩॥
--------------
ರನ್ನ
-->