ಒಟ್ಟು 7 ಕಡೆಗಳಲ್ಲಿ , 1 ಕವಿಗಳು , 7 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದರೊಳ್ ಮೂರ್ಧಾಭಿಷಿಕ್ತರ್ ಮಣಿಮಕುಟಧರರ್ ಕೃಷ್ಣೆ ಬಾಹಾಬಳಾಗ್ರ್ಯರ್ ಕದನಪ್ರೋಚ್ಚಂಡದಂಡಕ್ರಮವಿಜಿತರಿಪುಕ್ಷತ್ರಿಯರ್ ವೀರಲಕ್ಷ್ಮೀ ಸದನರ್ಸೋಮಾಮೃತಾಸ್ವಾದನಶುಚಿವದನರ್ ಮುನ್ಮಳ್ಕಾಡಿದರ್ ನೋ ಡಿದು ನಿನ್ನೀ ಕೇಶಪಾಶಂ ಕುರುಕುಲಪತಿಗಾಯ್ತಲ್ತೆ ಕೀನಾಶಪಾಶಂ॥೪೯॥
--------------
ರನ್ನ
ಎನಿತುಂ ಪೊಕ್ಕಿರ್ದಪಯ್ ನೀಂ ಪೊರಮಡು ಕೊಳದಿಂ ದ್ರೌಷದೀದ್ರೋಹದುಶ್ಯಾ ಸನದುಷ್ಟಜ್ಯೇಷ್ಠ ಭೀಷ್ಮಪ್ರಮುಖನಿಖಿಲಬಂಧುಕ್ಷಯೋತ್ಪನ್ನದುಃಖ ಧ್ವನಿವಾರಿಚ್ಛಿನ್ನಧೈರ್ಯದ್ರುಮ ಯಮಸುತ ನಿಷ್ಕರಣ ದ್ವೇಷಿ ಭೀಮ ಧ್ವನಿಯಂ ಕೇಳ್ದಿನ್ನುಮಿರ್ದಯ್ ಕುರುಕುಲವಿಲಯೋತ್ಪಾತನೋತ್ಪಾತಕೇತೂ॥೧೫॥
--------------
ರನ್ನ
ಕುರುಕುಲಕದಳೀಕಾನನ ಕರಿಕಳಭಂ ಶತ್ರುಶಲಭಸಂಪಾತನವಿ ಸ್ಫುರಿತಪ್ರದೀಪನಾಕುರು ಧರೆಯೊಳ್ ಕುರುಪತಿಯನರಸಿದಂ ಪವನಸುತಂ॥೨೭॥
--------------
ರನ್ನ
ಕೆಲರಂ ನುಣ್ಣನೆ ನೊಣೆದಂ ಕೆಲರಂ ಪಿಡಿದಡಸಿ ನುಂಗಿದಂ ಕುರುಕುಲರಂ ಕೆಲರಂ ಸೌಳನೆ ಸೀಳ್ದಂ ಕೆಲರಂ ಮಾರುತಿ ಜವಂಗೆ ಬಾಣಸುಗೆಯ್ದಂ॥೯॥
--------------
ರನ್ನ
ಜಲಧಿಗಳೇಳುಂ ಭೂಭೃ ತ್ಕುಲಂಗಳಂ ರಿಪುಗೆ ಸಿರಿಯನೀವಂತೆತ್ತಂ ತಳಮಳವಿಗಳಿಯೆ ಕುರುಕುಲ ತಿಳಕಂ ರಿಪುಗೆಂತುಮೀವನಲ್ಲಂ ಶ್ರೀಯಂ॥೫೬॥
--------------
ರನ್ನ
ಜಳದೊಳ್ ಮೀನಿರ್ಪವೊಲ್ ನೀಂ ಕೊಳದೊಳೆ ಮುಳುಗಿರ್ದಕಟಾ ಕೋಡಸೇಡಿಂ ಗೊಳಗಾದಯ್ ನಿನ್ನ ದುರ್ಯೋಧನವೆಸರ್ಗಿದು ಲಜ್ಜಾಕರಂ ತೋರಿದಯ್ ನಿ ನ್ನಳವಂ ಚಿಃ ಸತ್ತರೇಂ ಪುಟ್ಟರೆ ಪೊರಮಡು ನೀಂ ಕಯ್ದುಗೊಳ್ ಕೌರವೇಂದ್ರಾ ಚಳವಜ್ರಂ ಬಂದನೀಗಳ್ ಕುರುಕುಲಮಥನೋದ್ಭೀಕರಂ ಭೀಮಸೇನಂ॥೧೩॥
--------------
ರನ್ನ
ಪೆಂಡಿರ್ ಪಳಯಿಸುವಂದದೆ ಗಂಡರ್ ಪಳಯಿಸಿದೊಡಾಯಮಂ ಛಲಮಂ ಕಯ್ ಕೊಂಡೆಸೆಪರಾರೊ ಕುರುಕುಲ ಮಂಡನ ನೀನೆತ್ತಿಕೊಂಡ ಛಲಮನೆ ಮೆರೆಯಾ॥೩೩॥
--------------
ರನ್ನ
-->