ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 6 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರೆಮುಗಿದಿರ್ದ ಕಣ್ಗಳುಮಲರ್ದ ಮೊಗಂ ಕಡಿವೋದ ಕೆಯ್ಯುಮಾ ಸುರತರಮಾಗೆ ಕರ್ಚಿದವುಡುಂ ಬೆರಸನ್ಯಶರಪ್ರಹಾರ ಜ ರ್ಜರಿತಶರೀರನಾಗಿ ನವಲೋಹಿತವಾರ್ಧಿಯೊಳಳ್ದು ಬಿಳ್ದನಂ ಕುರುಪತಿ ನೋಡಿ ಕಂಡನಭಿಮನ್ಯುಕುಮಾರನನಾಜಿವೀರನಂ ॥೫೪॥
--------------
ರನ್ನ
ಉಡಿದಿರ್ದ ಕಯ್ದು ನೆತ್ತರ ಕಡಲೊಳಗಡಿಗಡಿಗೆ ತಳಮನುರ್ಚುತ್ಥಿರೆ ಕಾ ಲಿಡಲೆಡೆವಡೆಯದೆ ಕುರುಪತಿ ದಡಿಗವೆಣಂಗಳನೆ ಮೆಟ್ಟಿ ನಡೆಯುತ್ತಿರ್ದಂ॥೧೪॥
--------------
ರನ್ನ
ಕುರುಕುಲಕದಳೀಕಾನನ ಕರಿಕಳಭಂ ಶತ್ರುಶಲಭಸಂಪಾತನವಿ ಸ್ಫುರಿತಪ್ರದೀಪನಾಕುರು ಧರೆಯೊಳ್ ಕುರುಪತಿಯನರಸಿದಂ ಪವನಸುತಂ॥೨೭॥
--------------
ರನ್ನ
ಕುರುಪತಿ ನಿನ್ನ ಪೊಕ್ಕತೊರೆಗಳ್ ಮೊದಲಾಗಿಯೆ ಬತ್ತುತಿರ್ಪುವೀ ದೊರೆಯ ದುರಾತ್ಮನಂ ಖಳನನಾನೊಳಕೊಂಡೊಡೆ ಭೀಮನೀ ಸರೋ ವರಮುಮನೆಮ್ಮುಮಂ ಕದಡುಗುಂ ಪುಗದಿರ್ ತೊಲಗೆಂದು ಬಗ್ಗಿಪಂ ತಿರೆ ನೆಗೆದತ್ತನೇಕಬಕಕೋಕಮರಾಳವಿಹಂಗಮಸ್ವನಂ॥೧೨॥
--------------
ರನ್ನ
ತೆರಪಂ ನಿಟ್ಟಿಸಿ ಕುರುಪತಿ ಬರಸಿಡಿಲೆರಗುವವೊಲೆರಗಿಪೊಯ್ಯಲೊಡಂ ಮೆ ಯ್ಯರಿದು ಪವನಜನು ಮೇನೆಂ ದರಿಯದೆ ಮತಿವಿಕಳನಾಗಿ ಮೂರ್ಚ್ಛೆಗೆ ಸಂದಂ॥೨೬॥
--------------
ರನ್ನ
ನರಲೋಕ‌ಮನನುಭೋಗಿಸಿ ಸುರಲೋಕದ ಸುಖಮನಾತ್ಮ ವಿಭವದೆ ತಳೆದಾ ಕುರುಪತಿ ವೈಶಂಪಾಯನ ಸರಮಂ ಪುಗುವಂತೆ ನಾಗಲೋಕವ ಪೊಕ್ಕಂ॥೧೪॥
--------------
ರನ್ನ
-->