ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 6 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅನುಜೇಯನಿತ್ತು ನರಂಗಾತನ ತನಯಂಗಿತ್ತು ತನ್ನ ಮಗಳಂ ತಾನಾತನ ರದಮನೆಸಗಿ ಧರ್ಮಜನನುಜನ ನೆವದಿಂದಮರಸುಗೆಯ್ವಂ ಕೃಷ್ಣಂ॥೪೨॥
ಇದರೊಳ್ ಮೂರ್ಧಾಭಿಷಿಕ್ತರ್ ಮಣಿಮಕುಟಧರರ್ ಕೃಷ್ಣೆ ಬಾಹಾಬಳಾಗ್ರ್ಯರ್ಕದನಪ್ರೋಚ್ಚಂಡದಂಡಕ್ರಮವಿಜಿತರಿಪುಕ್ಷತ್ರಿಯರ್ ವೀರಲಕ್ಷ್ಮೀಸದನರ್ಸೋಮಾಮೃತಾಸ್ವಾದನಶುಚಿವದನರ್ ಮುನ್ಮಳ್ಕಾಡಿದರ್ ನೋಡಿದು ನಿನ್ನೀ ಕೇಶಪಾಶಂ ಕುರುಕುಲಪತಿಗಾಯ್ತಲ್ತೆ ಕೀನಾಶಪಾಶಂ॥೪೯॥
ಇರಲಿಂತೀಮಾದ್ರಿಪುತ್ರರ್ ಬಡವುಗಳವರೇಗೆಯ್ವರಿಂ ಧರ್ಮಪುತ್ರಂಬೆರಸೀಗಳ್ ಬರ್ಕೆ ಭೀಮಂ ಹರಿಸುತನೊಡನೀ ಮೂವರುಂ ಬರ್ಕೆ ಮೇಣಯ್ವರುಮಿಂಬರ್ಕೀ ಕೃತಾಂತಾತ್ಮಜಪವನಜಗಾಂಡೀವಧನ್ವರ್ಕಳೀಮೂವರೊಳೊರ್ವಂ ಕೃಷ್ಣ ಬರ್ಕಿಂ ಪೊಣರಲನಿಬರುಂ ಬರ್ಕೆ ಮೇಣ್ ಬನ್ನಮೀವೆಂ॥೪೨॥
ತುರುವಂ ಕಳಿಸುವ ಕೃಷ್ಣೆಯನಿರಿಯಂ ಪಿಡಿದುರ್ಚವೇಳ್ವ ಕೊಳನಂ ಪಿಂದುಂಪೆರಗಾಗಿ ಪುಗುವ ದುರ್ನಯಮರಿಪವೆ ಕೌರವನ ರಾಜ್ಯದಾಯದ ಕುಂದಂ॥೧೦॥
ಪುರುಷರ್ ಮೂವರೊಳೊರ್ವನೆಂಬರಸುರಪ್ರಧ್ವಂಸಿಯೆಂಬರ್ ಜಗದ್ಗುರುವೆಂಬರ್ ಪೆರರ್ಗೇಕೆ ತೇರನೆಸಪಂ ಧರ್ಮಾನುಜಂಗೇಕೆ ಕಿಂಕರನಾದಂ ಕರವೇರಿಯಾದನದರಿಂ ಸೂತಂ ಭಟಂ ಪೇಳಿ ಯೆಂಬರಮಾತೊಪ್ಪುಗುಮಾದಿ ದೇವನೆನಿಸಲ್ ಕೃಷ್ಣಂಗದೆಂತೊಪ್ಪುಗುಂ॥೪೩॥
ಹರಿಸಂಧಾನಕ್ಕೆ ವಂದಂದವಗಡಿಸಿದಹಂಕಾರಮೇನಾಯ್ತೊ ಕೃಷ್ಣಾಂಬರಕೇಶಾಕೃಷ್ಟಿಯಂ ಮಾಡಿಸಿದ ಮದಮದೇನಾಯ್ತೊ ಕೌಂತೇಯರಂ ಮಚ್ಚರದಿಂ ಕಾಂತಾರದೊಳ್ ತಿರ್ರನೆ ತಿರಿಪಿದ ಸೊರ್ಕೀಗಳೇನಾದುದೆಂದಾಕುರುವಂಶಾಧೀಶನಂ ಮೂದಲಿಸಿದನದಟಂ ಭೀಮನುದ್ದಾಮಭೀಮಂ॥೧೪॥