ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 6 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಸಂ ದೀಕ್ಷಿತನಿಲ್ಲಿ ಋತ್ವಿಜರುಮೆಮ್ಮೀ ನಾಲ್ವರುಂ ಸಂಗರಾ ಧ್ವರದೊಳ್ ತಾನುಪದೇಶಕಂ ಮುರಹರಂ ನೀನುಂ ಗೃಹೀತವ್ರತಾ ಚರಣವ್ಯಾಪಿಕೆಯುಂ ಭವತ್ಪರಿಭವಂ ಸಂಚಾರಕಂ ಕೌರವೇ ಶ್ವರನೀತಂ ಪಶುವಾಗೆಬೇಳ್ದೆನಿವಂ ಕೋಪಾಗ್ನಿಯಿಂದಗ್ನಿಜೇ॥೪೬॥
--------------
ರನ್ನ
ಇಡೆ ತೊಡೆಯನುಡಿದು ನೆಟ್ಟನೆ ಕೆಡೆಯುತ್ತುಂ ಕರ್ಚಿ ನೆಲನನಾನಿದನೆಂತುಂ ಬಿಡೆನೆಂಬ ತೆರದೆ ಕುಲಗಿರಿ ಕೆಡೆವಂದದೆ ಕೌರವೇಂದ್ರನಾಗಳ್ ಕೆಡೆದಂ॥೩೭॥
--------------
ರನ್ನ
ಕದನದೊಳುಣ್ಮಿದೊಳ್ಮಿದುಳ ಕರ್ದಮದೊಳ್ ಜಗುಳ್ದಂಘ್ರಿ ಜಾರಿ ಪೋ ಪುದುಮೊಡನಿರ್ದ ಸಂಜಯನಿಳೇಶ್ವರನಂ ಪಿಡಿದೂರುಭಂಗಮಾ ಗದೆ ವಲಮೆಂದೊಡಾಗದೆನೆ ಪುಲ್ಮರುಳೊಂದೆಡೆವೋಗಿ ಭೀಮ ಕೋ ಪದೆ ನಿನಗೂರುಭಂಗಭಯಮಾಗದೆ ಪೋಕುಮೆ ಕೌರವೇಶ್ವರಾ॥೪೪॥
--------------
ರನ್ನ
ಜಳದೊಳ್ ಮೀನಿರ್ಪವೊಲ್ ನೀಂ ಕೊಳದೊಳೆ ಮುಳುಗಿರ್ದಕಟಾ ಕೋಡಸೇಡಿಂ ಗೊಳಗಾದಯ್ ನಿನ್ನ ದುರ್ಯೋಧನವೆಸರ್ಗಿದು ಲಜ್ಜಾಕರಂ ತೋರಿದಯ್ ನಿ ನ್ನಳವಂ ಚಿಃ ಸತ್ತರೇಂ ಪುಟ್ಟರೆ ಪೊರಮಡು ನೀಂ ಕಯ್ದುಗೊಳ್ ಕೌರವೇಂದ್ರಾ ಚಳವಜ್ರಂ ಬಂದನೀಗಳ್ ಕುರುಕುಲಮಥನೋದ್ಭೀಕರಂ ಭೀಮಸೇನಂ॥೧೩॥
--------------
ರನ್ನ
ಪಸಿವಿನೊಳನ್ನಮಂ ಪಸಿದು ಬಂದವರ್ಗಿಕ್ಕುವ ಯುದ್ಧರಂಗದೊಳ್ ಕುಸಿಯದೆ ಸೂರೆಗೊಳ್ಳದೆ ರಣಕ್ಕೆ ಶುಚಿತ್ವಮನಪ್ಪುಕೆಯ್ವ ಮಾ ನಸಿಕೆಯ ನಾಲ್ವರುಂ ನಮಗೆ ವಂದ್ಯರವಂದೀರೊಳೀತನಲ್ತೆ ಸಾ ಹಸಧನನೆಂದು ಕೆಯ್ಮುಗಿದನಂದಭಿಮನ್ಯುಗೆ ಕೌರವೇಶ್ವರಂ॥೬೦॥
--------------
ರನ್ನ
ಭರತಾನ್ವಾಯದೋಳಂದಿನಿಂದುವರೆಗಂ ಸಾಪತ್ನರೊಳ್ ಬದ್ಧಮ ತ್ಸರಮಿಲ್ಲೆಮ್ಮನಕಾರಣಂ ಕದಡಿದಯ್ ಸಾವೆಯ್ದಿದಯ್ ನಷ್ಟಸೋ ದರಮಾದತ್ತೆನಗಂ ಸ್ವಗೋತ್ರವಧೆಯಪ್ಪಾಪಾತಕಂ ಕೌರವೇ ಶ್ವರ ನೀಂ ಸಂಧಿಗೊಡಂಬಡಿಂತು ಕೊಳನಂ ಪೊಕ್ಕಿರ್ದುದೇಂ ತಕ್ಕುದೇ॥೯॥
--------------
ರನ್ನ
-->