ಒಟ್ಟು 7 ಕಡೆಗಳಲ್ಲಿ , 1 ಕವಿಗಳು , 5 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಮ್ಮಗನೆನಾಗೆ ಧರ್ಮಜನೇಮ್ಮಗನಲ್ಲನೆ ಬಳಿಕ್ಕೆ ನೀಮುಂ ತಾಮುಂನಿಮ್ಮೊಳ್ ನೇರ್ಪಡುಗಿಡದೆ ಸುಖಮ್ಮುನ್ನಿನ ತೆರದೆ ಬಾಳ್ವುದಾಂ ಬೆಸಕೆಯ್ಯೆಂ॥೧೨॥
ಒಡವುಟ್ಟಿದರಂ ಕೊಂದವರಡಗಂ ತಿಂದವರ ನೆತ್ತರಂ ಬೆಲಗಸೆಯೊಳ್ಕುಡಿವೀ ನಿಸ್ತ್ರಿಂಶತೆಯಂಹಿಡಿಂಬಿಯಂ ಪೊರ್ದಿ ಕಲ್ತನಾಗನೆ ಭೀಮಂ॥೨೮॥
ಧವಳ ಗಜೇಂದ್ರಮುಂ ಧವಳಚಾಮರಮುಂ ಧವಳಾತಪತ್ರಮುಂಧವಳವಿಲೋಚನೋತ್ಪಲ ವಧೂಜನಮುಂ ಬೆಲಸಷ್ಟದಿಕ್ತಟಂಧವಳಿಸೆ ಕೀರ್ತಿಯಿಂ ಧವಳ ಮಂಗಳಗೇಯದಿನೊಪ್ಪಿ ಬರ್ಪ ಕೌರವಧವಳಂಗೆ ದೇಸಿಗನೆ ಬರ್ಪವೊಲೊರ್ವನೆ ಬರ್ಪುದಾದುದೆ॥೪೧॥
ವನಿತೆಯ ಕೇಶಮಂ ಸಭೆಯೊಳೆನ್ನನುಜಂ ತೆಗೆವಲ್ಲಿ ಗಂಡನಾಗನೆ ಭಗದತ್ತನಾನೆ ಬರಿಯೆಲ್ವುಡಿವನ್ನೆಗಮೊತ್ತೆ ಗಂಡನಾಗನೆ ಕೊಲಲೊಲ್ಲದಂಗಪತಿ ಬಿಲ್ಲೊಳೆ ಕೊಂಡೆಳೆವಲ್ಲಿ ಗಂಡನಾಗನೆ ಕುರುಬಾಲಸಂಹರಣ ಮಾತ್ರದೆ ಮಾರುತಿ ಗಂಡನಾದನೇ॥೨೭॥
ಸುತಶತಕಮುಂ ಸಹೋದರಶತಕಮುಮೆಲ್ಲಿತ್ತೊ ಮಗನೆ ಪೇಳೆಲ್ಲಿತ್ತೋಚತುರಂಗ ಸೈನ್ಯಮೆಲ್ಲಿದರತಿರಥಸಮರಥಮಹಾರಥಾರ್ಧರಥರ್ಕಳ್॥೪೪॥