ಒಟ್ಟು 3 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಿಜಜೀವಂ ಪರಲೋಕದೊಳ್ ನಿಜಮಹಾಮಾಂಸಂ ಪಿಶಾಚಾಸ್ಯದೊಳ್ನಿಜರಕ್ತಂ ರಿಪುಕುಕ್ಷಿಯೊಳ್ ನಿಜಶಿರಂ ನಕ್ತಂಚರೀ ಹಸ್ತದೊಳನಿಜಕಾಯಂ ಕುರುಭೂಮಿಯೊಳ್ ನೆಲಸೆ ಗಾಂಧಾರೀಜ ದುರ್ಯೋಧನಾನುಜ ದುಶ್ಯಾಸನ ಭೀಮ ಭೀಮಗದೆಯಿಂ ಪಂಚತ್ವಮಂ ಪೋರ್ದಿದಯ್॥೫॥
ನಿನ್ನೀ ಕೆಳೆಯ ಸುಯೋಧನನನ್ನೋಡದೆ ನುಡಿಯದಪ್ಪಿಕೊಳ್ಳದೆ ಬೆಸನೇನೆನ್ನದೆ ಜೀಯೆನ್ನದೆ ದೇವೆನ್ನದದೇಕುಸಿರದಿರ್ಪೆಯಂಗಾಧಿಪತಿ॥೧೬॥
ನೆಗಳ್ದಾಭಾರತಮಲ್ಲ ಶಕ್ರಸುತ ಬಾಣಾಘಾತದಿಂ ಭೀಮಭೀಮಗದಾದಂಡವಿಘಾತದಿಂ ಕುರುನೃಪಾನೀಕಂ ಪಡಲ್ವಟ್ಟು ಜೀರಿಗೆಯೋಕ್ಕಲ್ಗೆಣೆಯಾಗಿ ಬಿಳ್ದಭಟರಿಂ ಬಿಳ್ದಶ್ವದಿಂ ಬಿಳ್ದದಂತಿಗಳಿಂದಂ ಜವನುಂಡು ಕಾರಿದವೊಲಾಯ್ತೆತ್ತಂ ಕುರುಕ್ಷೇತ್ರದೊಳ್॥೨॥