ಒಟ್ಟು 4 ಕಡೆಗಳಲ್ಲಿ , 1 ಕವಿಗಳು , 4 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅದಟಿನ ಪಾರ್ಥನೆಚ್ಚು ಕೊಲೆ ಜಾತಬಲಂ ದ್ರುಪದಾತ್ಮಜಾಥನೋವದೆ ಪುಡಿಯೊಳ್ ಪೊರಳ್ಚಿ ತಲೆಯಂ ತೆಗೆವಲ್ಲಿ ಪಿನಾಕವೆತ್ತವೋದುದೊ ಶರವೆತ್ತವೋದುದೊ ಲಲಾಟದಿನಿಂಗಳಣ್ಣದೆತ್ತವೋದುದೊ ಗುರುಸೂನು ತಾನುಮಣಮಮ್ಮನಲಂಪುಮದೆತ್ತವೋದುದೋ॥೫೧॥
ಗುರುವಂ ಪ್ರೋ ಜ್ಝಿತಚಾಪನಂ ಪುಸಿದುಕೊಂದಾ ಭೀರಮಂ ಭೀಷ್ಮರಂಶರಶಯ್ಯಾಗತರಂ ಕರುತ್ತು ಗುರಿಯೆಚ್ಚಾ ಪೊಚ್ಚರಂ ಕರ್ಣನಂವಿರಥಜ್ಯಾಯುಧನೆನ್ನದೆಚ್ಚು ತಲೆಗೊಂಡಾ ಶೌರ್ಯಮಂ ಪಾಂಡುಪುತ್ರರೆ ಬಲ್ಲರ್ ಮೆರೆಯಲ್ಕೆ ಸಾಹಸಧನಂ ಧುರ್ಯೋಧನಂ ಬಲ್ಲನೇ॥೩೩॥
ದಿವಿಜತನಯಂಗೆ ಮುಖ್ಯಂರವಿಜಂಜಯಕಾದನೆನಗೆ ಕಣ್ಣೊಳ್ ಕಾಣಂಕಿವಿಯೊಳ್ ಕೇಳಂ ಕಾಣ್ಬಂದವೆಂತು ಕೇಳ್ವಂದಮೆಂತು ತಲೆಯಿಲ್ಲದನಾ॥೩೬॥
ಮಲುದಾತ್ಮಜ ನಿಜರಿಪು ತಲೆಗರೆದಿರ್ದಪನಿಲ್ಲಿ ನೋಡು ಕೊಳದೊಳಗೆಂಬಂತಿರೆ ಪೊಳೆದು ತೋರ್ಪ ಜಲಚರಪರಿಕರಮರಿಪಿದುವು ತಾಮೆ ದುರ್ಯೋಧನನಂ॥೪೬॥