ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಲಿಂತೀಮಾದ್ರಿಪುತ್ರರ್ ಬಡವುಗಳವರೇಗೆಯ್ವರಿಂ ಧರ್ಮಪುತ್ರಂ ಬೆರಸೀಗಳ್ ಬರ್ಕೆ ಭೀಮಂ ಹರಿಸುತನೊಡನೀ ಮೂವರುಂ ಬರ್ಕೆ ಮೇಣ ಯ್ವರುಮಿಂಬರ್ಕೀ ಕೃತಾಂತಾತ್ಮಜಪವನಜಗಾಂಡೀವಧನ್ವರ್ಕಳೀಮೂ ವರೊಳೊರ್ವಂ ಕೃಷ್ಣ ಬರ್ಕಿಂ ಪೊಣರಲನಿಬರುಂ ಬರ್ಕೆ ಮೇಣ್ ಬನ್ನಮೀವೆಂ॥೪೨॥
--------------
ರನ್ನ
ಸ್ಥಿರಸತ್ಯವ್ರತಿಯೆಂದು ಧರ್ಮರುಚಿಯೆಂದಾ ಧರ್ಮಪುತ್ರಂ ದಯಾ ಪರನೆಂದೆಲ್ಲರ ಪೇಳ್ದ ಮಾತು ಪುಸಿಯಾಯ್ತೀ ಕಾರ್ಮುಕಾಚಾರ್ಯನಂ ಗುರುವಂ ಬ್ರಾಹ್ಮಣನಂ ತೊದಳ್ನುಡಿದು ಕೊಂದದಾ ಮೃಷಾಪಾತಕಂ ಪರಮೆಂಬೀ ನುಡಿಯಿಂ ಪೃಥಾಪ್ರಿಯಸುತಂ ಪಾಪಕ್ಕೆ ಪಕ್ಕಾಗನೇ॥೨೩॥
--------------
ರನ್ನ
-->