ಒಟ್ಟು 16 ಕಡೆಗಳಲ್ಲಿ , 1 ಕವಿಗಳು , 12 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಸಂ ದೀಕ್ಷಿತನಿಲ್ಲಿ ಋತ್ವಿಜರುಮೆಮ್ಮೀ ನಾಲ್ವರುಂ ಸಂಗರಾ ಧ್ವರದೊಳ್ ತಾನುಪದೇಶಕಂ ಮುರಹರಂ ನೀನುಂ ಗೃಹೀತವ್ರತಾ ಚರಣವ್ಯಾಪಿಕೆಯುಂ ಭವತ್ಪರಿಭವಂ ಸಂಚಾರಕಂ ಕೌರವೇ ಶ್ವರನೀತಂ ಪಶುವಾಗೆಬೇಳ್ದೆನಿವಂ ಕೋಪಾಗ್ನಿಯಿಂದಗ್ನಿಜೇ॥೪೬॥
--------------
ರನ್ನ
ಅಸ಼ಮಬಲ ಭವದ್ವಿಕ್ರಮ ಮಸಂಭವಂ ಪೆರರ್ಗೆ ನಿನ್ನನಾನಿನಿತಂ ಪ್ರಾ ರ್ಥಿಸುವೆನಭಿಮನ್ಯು ನಿಜ ಸಾ ಹಸೈಕದೇಶಾನುಮರಣಮೆಮಗಕ್ಕೆ ಗಡಾ॥೫೭॥
--------------
ರನ್ನ
ಗುರುವಿನ ನೆತ್ತರಂ ಕುಡಿವೆನಪ್ಪೊಡೆ ದ್ವಿಜವಂಶಜಂ ನಿಜಾ ವರಜನ ನೆತ್ತರಂ ಕುಡಿವೆನಪ್ಪೊಡೆ ಭೀಮನೆ ಪೀರ್ದನೆಯ್ದೆ ಭೀ ಷ್ಮರ ಬಿಸುನೆತ್ತರಂ ಕುಡಿವೊಡಿನ್ನುಮೊಳಂ ಕುರುರಾಜ ನಿನ್ನ ನೆ ತ್ತರ ಸವಿನೋಳ್ಪೊಡಾಂ ಬಯಸಿ ಬಂದಪೆನೆಂದದೊಂದು ಪುಲ್ಮರುಳ್॥೪೩॥
--------------
ರನ್ನ
ತನುಜಾನುಜರ ವಿಯೋಗದ ಮನಃಕ್ಷತಂ ನೋಯಿಸಲ್ಕೆ ನೆರೆಯದೆ ಸಮರಾ ವನಿಜಾತ ಚರಣಕ್ಷತ ಮಿನಿಸು ನೋಯಿಕುಮೆ ವಜ್ರಮನನಪ್ಪೆನ್ನಂ॥೧೯॥
--------------
ರನ್ನ
ಧಾರಿಣಿಯೊಳ್ ನಿಜಸಂಯುಗ ಭಾರಮನಾಂತಿರ್ದ ವೀರಪುಂಗವರಿರೆ ತ ದ್ಭಾಲಮನಾಂತಭಿಮನ್ಯು ಕು ಮಾರಂ ಪುಗೆ ವೀರರಮಣನೆನಿಸಿದನಲ್ತೆ॥೫೮॥
--------------
ರನ್ನ
ನಿಜಜೀವಂ ಪರಲೋಕದೊಳ್ ನಿಜಮಹಾಮಾಂಸಂ ಪಿಶಾಚಾಸ್ಯದೊಳ್ ನಿಜರಕ್ತಂ ರಿಪುಕುಕ್ಷಿಯೊಳ್ ನಿಜಶಿರಂ ನಕ್ತಂಚರೀ ಹಸ್ತದೊಳ ನಿಜಕಾಯಂ ಕುರುಭೂಮಿಯೊಳ್ ನೆಲಸೆ ಗಾಂಧಾರೀಜ ದುರ್ಯೋಧನಾ ನುಜ ದುಶ್ಯಾಸನ ಭೀಮ ಭೀಮಗದೆಯಿಂ ಪಂಚತ್ವಮಂ ಪೋರ್ದಿದಯ್॥೫॥
--------------
ರನ್ನ
ನಿಜಮಕುಟಸ್ಫುರನ್ಮಣಿಗಣಚ್ಛವಿಯಿಂ ಸುರಚಾಪಲೀಲೆ ಪಂ ಕಜವನದೊಳ್ ಮನಂಗೊಳಿಸೆ ತನ್ನಯ ಮೇಗೊಗೆದಿರ್ದ ನೀಲನೀ ರಜವನದಿಂ ಕರಂಗಿ ಕಮಲಾಕರದಿಂ ಪೊರಮಟ್ಟನಾಗಳಾ ಭುಜಯುಗತೋರಣಾಯಿತಗದಾಪರಿಘಂ ಫಣಿರಾಜಕೇತನಂ॥೨೭॥
--------------
ರನ್ನ
ನೆಗಪಿ ವರೂಥಮಂ ವಸುಧೆ ನುಂಗಿದುದುಂ ಸಮಪಾದ ಶೋಭೆಯುಂ ಬಗೆಗೊಳೆ ತನ್ನ ಮುಂ ತೆಗೆದ ದಕ್ಷಿಣ ಮುಷ್ಟಿಯೆ ಕರ್ಣಮೂಲದೊಳ್ ಸೊಗಯಿಸೆ ಪಾಳಿಯಂ ನೆರಪದಾಳ್ದನ ಕಜ್ಜಮನೊಕ್ಕು ಸತ್ತರಂ ನಗುವವೊಲಿರ್ದನಂಗಪತಿ ನೆಮ್ಮಿ ನಿಜೋನ್ನತಕೇತುದಂಡಮಂ॥೧೦॥
--------------
ರನ್ನ
ಮದಮಣಮಿಲ್ಲ ದಾನಗುಣದಿಂ ನೆಗಳ್ದ್ದುಂ ನೃಪಸಿಂಹನಾಗಿಯುಂ ವಿದಿತವಿಶುದ್ಧಭದ್ರಗುಣನಂತೆ ವಿರುದ್ಧಮಿದೆಂಬಿನಂ ನಿಜಾ ಭ್ಯುದಯನಿವೇದದೀರ್ಘಕರಮೊಪ್ಪೆ ಜಗತ್ಪ್ರಿಯವಾದ ದೇವನಂ ಕದ ಗಣನಾಯಕಂ ವರದನಕ್ಕಮಗಮ್ಮನಗಂಧವಾರಣಂ
--------------
ರನ್ನ
ಮಲುದಾತ್ಮಜ ನಿಜರಿಪು ತಲೆ ಗರೆದಿರ್ದಪನಿಲ್ಲಿ ನೋಡು ಕೊಳದೊಳಗೆಂಬಂ ತಿರೆ ಪೊಳೆದು ತೋರ್ಪ ಜಲಚರ ಪರಿಕರಮರಿಪಿದುವು ತಾಮೆ ದುರ್ಯೋಧನನಂ॥೪೬॥
--------------
ರನ್ನ
ಮುಳಿಸಿಂ ನಂಜಕ್ಕಿಕೊಂದಂದಿನ ಜತುಗೃಹದೊಳ್ ಸುಟ್ಟುಕೊಂದಂದಿನುರ್ವೀ ತಳಮಂ ಜೂದಾಡಿ ಗೆಲ್ದಂದಿನ ನಿಜಕಬರೀನೀವಿಬಂಧಂಗಳಂ ದೋ ರ್ವಳದಿಂದಂ ತಮ್ಮನಿಂದಂ ತೆಗೆಯಿಸಿ ನಡೆದಾ ನೀಚನಾ ದ್ರೋಹನಾ ಸಂ ಚಳನಾ ಚಂಡಾಲನಾ ಪಾತಕನಿರವನಿದಂ ನೋಡು ಪಂಕೇಜವಕ್ತ್ರೇ॥೪೫॥
--------------
ರನ್ನ
ಶರಸಂಧಾನಮನನ್ಯಸೈನ್ಯದೊಡಲೊಳ್ ಬಿಲ್ಬಲ್ಮೆಯಂ ತನ್ನ ಶಿ ಷ್ಯರ ಮೈಯೊಳ್ ನಿಜಕೀರ್ತಿಯಂ ನಿಖಿಳದಿಕ್ಚಕ್ರಂಗಳೊಳ್ ಚಿತ್ತಮಂ ಹರ ಪಾದಾಂಬುಜಯುಗ್ಮದೊಳ್ ನಿರಿಸಿದಂ ಚಾಪಾಗಮಾಚಾರ್ಯರೊಳ್ ದೊರೆಯಾರೆಂಬಿನಮಣ್ಮಿ ಸತ್ತಳವಿದೇಂ ದ್ರೋಣಂಗೆ ಮೈವೆತ್ತುದೋ॥೫೨॥
--------------
ರನ್ನ
-->