ಒಟ್ಟು 5 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಡವುಟ್ಟಿದರಂ ಕೊಂದವ ರಡಗಂ ತಿಂದವರ ನೆತ್ತರಂ ಬೆಲಗಸೆಯೊಳ್ ಕುಡಿವೀ ನಿಸ್ತ್ರಿಂಶತೆಯಂ ಹಿಡಿಂಬಿಯಂ ಪೊರ್ದಿ ಕಲ್ತನಾಗನೆ ಭೀಮಂ॥೨೮॥
--------------
ರನ್ನ
ಗುರುವಿನ ನೆತ್ತರಂ ಕುಡಿವೆನಪ್ಪೊಡೆ ದ್ವಿಜವಂಶಜಂ ನಿಜಾ ವರಜನ ನೆತ್ತರಂ ಕುಡಿವೆನಪ್ಪೊಡೆ ಭೀಮನೆ ಪೀರ್ದನೆಯ್ದೆ ಭೀ ಷ್ಮರ ಬಿಸುನೆತ್ತರಂ ಕುಡಿವೊಡಿನ್ನುಮೊಳಂ ಕುರುರಾಜ ನಿನ್ನ ನೆ ತ್ತರ ಸವಿನೋಳ್ಪೊಡಾಂ ಬಯಸಿ ಬಂದಪೆನೆಂದದೊಂದು ಪುಲ್ಮರುಳ್॥೪೩॥
--------------
ರನ್ನ
ನಡುವುಡಿವನ್ನಮೇರಿ ಬರಿಯೆಲ್ವುಡಿವನ್ನೆಗಮೊತ್ತಿ ಮೆಟ್ಟಿ ಮೆ ಯ್ಯಡಗಡಗಾಗೆ ಮುನ್ನುರಮನಿರ್ಬಗಿಯಾಗಿರೆ ಪೋಳ್ದು ನೆತ್ತರಂ ಕುಡಿಕುಡಿದಾರ್ದ ವೈರಿಯುಳಿದನ್ನೆಗಮೆನ್ನಳಲೆಂತು ಪೋಕುಮೆಂ ದಡಿಗಡಿಗಳ್ತು ತನ್ನಣುಗದಮ್ಮನನೀಕ್ಷಿಸಿದಂ ಸುಯೋಧನಂ॥೪॥
--------------
ರನ್ನ
-->