ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 5 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸ಼ಮಬಲ ಭವದ್ವಿಕ್ರಮ ಮಸಂಭವಂ ಪೆರರ್ಗೆ ನಿನ್ನನಾನಿನಿತಂ ಪ್ರಾ ರ್ಥಿಸುವೆನಭಿಮನ್ಯು ನಿಜ ಸಾ ಹಸೈಕದೇಶಾನುಮರಣಮೆಮಗಕ್ಕೆ ಗಡಾ॥೫೭॥
--------------
ರನ್ನ
ಇನಿಸಿನಿಸುತಿಂಬೆವೊರ್ಮೆಯೆ ತಿನೆ ತವುಗುಮಿದೆಂದು ತಾಯುಮಾನೆಯ ಪೆಣನಂ ತಿನಲಾರದೆ ಪೆರರ್ಗಿಕ್ಕದೆ ಮನಮಂ ಪಸುತಿರ್ದುವಲ್ಲಿ ಲೋಭಿಮರುಳ್ಗಳ್॥೩೮॥
--------------
ರನ್ನ
ಗುರುಪಣ್ಣಿದ ಚಕ್ರವ್ಯೂ ಹರಚನೆ ಪೆರರ್ಗರಿದು ಪುಗಲಿದಂ ಪೊಕ್ಕು ರಣಾ ಜಿರದೊಳರಿನೃಪರನಿಕ್ಕೀದ ನರಸುತ ನಿನ್ನೊರೆಗೆ ದೊರೆಗೆ ಗಂಡರುಮೋಳರೇ॥೫೫॥
--------------
ರನ್ನ
ಪುರುಷರ್ ಮೂವರೊಳೊರ್ವನೆಂಬರಸುರಪ್ರಧ್ವಂಸಿಯೆಂಬರ್ ಜಗ ದ್ಗುರುವೆಂಬರ್ ಪೆರರ್ಗೇಕೆ ತೇರನೆಸಪಂ ಧರ್ಮಾನುಜಂಗೇಕೆ ಕಿಂ ಕರನಾದಂ ಕರವೇರಿಯಾದನದರಿಂ ಸೂತಂ ಭಟಂ ಪೇಳಿ ಯೆಂ ಬರಮಾತೊಪ್ಪುಗುಮಾದಿ ದೇವನೆನಿಸಲ್ ಕೃಷ್ಣಂಗದೆಂತೊಪ್ಪುಗುಂ॥೪೩॥
--------------
ರನ್ನ
ಮುಳಿದಾಂಪರ್ ಧರಣೀಶ್ವರರ್ ಮಿಗೆ ಪೆರರ್ ಬಿಲ್ಗೊಂಡುಮೇಗೆಯ್ವರೆ ನ್ನೊಳಮಿಂ ತೀರದ ಕಾರ್ಯಭರಮಂ ತೀರ್ಚಲ್ ಪೆರರ್ ಗಂಡರಿ ನ್ನೊಳರೇ ಪಾಂಡವರೆಂಬರೇಗಹನಮೆಂಬಾದರ್ಪದಂತಾಜಿಯೊಳ್ ಸುಳರಂಬೆತ್ತಿರೆ ಸತ್ತರೆನ್ನಿನಿಬರುಂ ತಮ್ಮಂದಿರುಂ ಮಕ್ಕಳುಂ ॥೧೨॥
--------------
ರನ್ನ
-->