ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಶುಧರಂ ಚಕ್ರಧರಂ ಸುರಪತಿ ಭೂಕಾಂತೆಯೆಂದೀ ಪೇಳ್ದ ಯ್ವರೆ ಕೂಡಿ ನಿನ್ನ ಕೊಂದರ್ ನರನೊರ್ವನೆ ಕೊಂದನಲ್ಲನಂಗಾಧಿಪತೀ॥೨೬॥
--------------
ರನ್ನ
ಸ್ಥಿರಸತ್ಯವ್ರತಿಯೆಂದು ಧರ್ಮರುಚಿಯೆಂದಾ ಧರ್ಮಪುತ್ರಂ ದಯಾ ಪರನೆಂದೆಲ್ಲರ ಪೇಳ್ದ ಮಾತು ಪುಸಿಯಾಯ್ತೀ ಕಾರ್ಮುಕಾಚಾರ್ಯನಂ ಗುರುವಂ ಬ್ರಾಹ್ಮಣನಂ ತೊದಳ್ನುಡಿದು ಕೊಂದದಾ ಮೃಷಾಪಾತಕಂ ಪರಮೆಂಬೀ ನುಡಿಯಿಂ ಪೃಥಾಪ್ರಿಯಸುತಂ ಪಾಪಕ್ಕೆ ಪಕ್ಕಾಗನೇ॥೨೩॥
--------------
ರನ್ನ
-->