ಒಟ್ಟು 24 ಕಡೆಗಳಲ್ಲಿ , 1 ಕವಿಗಳು , 17 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಂಧನೃಪಸುತನೆಯೋ ಜಾತ್ಯಂಧನೆಯೋ ಮೆಟ್ಟದಗಲ್ದು ಪೋಗೆನುತುಂ ಕೋಪಾಂಧರ್ ಜಡಿದರ್ ಪತಿಯ ಕಬಂಧಮನೆಡಗಲಿಸಿ ಪೋಪ ದುರ್ಯೋಧನನಂ॥೧೬॥
ಇನಸುತನಿರವಂ ದುಶ್ಯಾಸನನಿರವಂ ಕಂಡುಮಿನ್ನುಮೆನ್ನಸುವಿದು ನೆಟ್ಟನೆ ಪೋದುದಿಲ್ಲ ಕಲ್ಲೆರ್ದೆತನದಿಂದೆನ್ನಂತು ಬರ್ದನಾವನುಮೊಳನೇ॥೨೮॥
ಈ ದೊರೆಯರಮಗನುಂ ಮೃಷವಾದಂ ನೋಡೆಂದು ಧರ್ಮನಂ ಮೂದಲಿಸಲ್ಪೋದಂ ಪುತ್ರನನಲಸಲ್ಪೋದನೆ ಯಮಪುರಕೆ ಮುಕ್ಥಬಾಣಂ ದ್ರೋಣಂ॥೨೫॥
ಕದನದೊಳುಣ್ಮಿದೊಳ್ಮಿದುಳ ಕರ್ದಮದೊಳ್ ಜಗುಳ್ದಂಘ್ರಿ ಜಾರಿ ಪೋಪುದುಮೊಡನಿರ್ದ ಸಂಜಯನಿಳೇಶ್ವರನಂ ಪಿಡಿದೂರುಭಂಗಮಾಗದೆ ವಲಮೆಂದೊಡಾಗದೆನೆ ಪುಲ್ಮರುಳೊಂದೆಡೆವೋಗಿ ಭೀಮ ಕೋಪದೆ ನಿನಗೂರುಭಂಗಭಯಮಾಗದೆ ಪೋಕುಮೆ ಕೌರವೇಶ್ವರಾ॥೪೪॥
ಚಾತುರ್ವಣ್ ರ್ಣ್ಯದೊಳಂ ದ್ವಿಜಜಾತಿಗೆ ದರ್ಭಾಧಿಕಾರಮಲ್ಲದೆ ವಂಶೋದ್ಭೂತ ನೃಪೋಚಿತಮರಿಯಂಘಾತಿಪ ಶಸ್ತ್ರಾಸ್ತ್ರಮವರ್ಗೆ ಜಾತಿವಿರುದ್ಧಂ॥೧೭॥
ಜತುಗೇಹಾನಲಬೀಜಮುಗ್ರವಿಷಸಂಜತಾಂಕುರಂ ಕ್ರೀಡನೋದ್ದತಿಕೃದ್ದ್ಯೂತವಿನೋದಪಲ್ಲವಚಯಂ ಪಾಂಚಾಲರಾಜಾತ್ಮಜಾಯತಕೇಶಗ್ರಹಪುಷ್ಪಮಾಗೆ ಬೆಳೆದಾ ವೈರದ್ರುಮಂ ಕೌರವಕ್ಷಿತಿಪಾಲೋರು ಕಿರೀಟಭಂಗ ಫಲಮಂ ಪೇಳ್ ಮಾಡದೇಂ ಪೋಕುಮೇ॥೫೭॥
ತನಗೆ ಹತೋಶ್ವತ್ಥಾಮೋಯೆನಲಕ್ಕುಮೆ ಯಮಪುರಕ್ಕೆ ಗುರು ಪೋಪೆಡೆಯೊಳ್ಘನಕುಂಜರ ಎಂದೆಂಗುಮೇಜನರಂಜನೆಗರಿಯಲಾದುದಿಲ್ಲಲಮಗನಂ
ನಡುವುಡಿವನ್ನಮೇರಿ ಬರಿಯೆಲ್ವುಡಿವನ್ನೆಗಮೊತ್ತಿ ಮೆಟ್ಟಿ ಮೆಯ್ಯಡಗಡಗಾಗೆ ಮುನ್ನುರಮನಿರ್ಬಗಿಯಾಗಿರೆ ಪೋಳ್ದು ನೆತ್ತರಂಕುಡಿಕುಡಿದಾರ್ದ ವೈರಿಯುಳಿದನ್ನೆಗಮೆನ್ನಳಲೆಂತು ಪೋಕುಮೆಂದಡಿಗಡಿಗಳ್ತು ತನ್ನಣುಗದಮ್ಮನನೀಕ್ಷಿಸಿದಂ ಸುಯೋಧನಂ॥೪॥
ನಿಜಜೀವಂ ಪರಲೋಕದೊಳ್ ನಿಜಮಹಾಮಾಂಸಂ ಪಿಶಾಚಾಸ್ಯದೊಳ್ನಿಜರಕ್ತಂ ರಿಪುಕುಕ್ಷಿಯೊಳ್ ನಿಜಶಿರಂ ನಕ್ತಂಚರೀ ಹಸ್ತದೊಳನಿಜಕಾಯಂ ಕುರುಭೂಮಿಯೊಳ್ ನೆಲಸೆ ಗಾಂಧಾರೀಜ ದುರ್ಯೋಧನಾನುಜ ದುಶ್ಯಾಸನ ಭೀಮ ಭೀಮಗದೆಯಿಂ ಪಂಚತ್ವಮಂ ಪೋರ್ದಿದಯ್॥೫॥
ನಿಮಗೆ ಪೊಡಮಟ್ಟು ಪೋಪೀಸಮಕಟ್ಟಿಂ ಬಂದೆನಹಿತರೊಳ್ ಸಂಧಿಯನೇಂಸಮಕೊಳಿಸಲೆಂದು ಬಂದೆನೆಸಮರದೊಳೆನಗಜ್ಜ ಪೇಳಿಮಾವುದು ಕಜ್ಜಂ॥೪೫॥
ನುಡಿಯದೆ ಪೋಗಲೀಯೆನೆಲೆ ಪೋದೊಡೆ ಧೂರ್ಜಟಿಯಾಣೆ ಮೀರಿ ಪೋದೊಡೆ ಕಲಿಭೀಮನಾಣೆ ಧೂರ್ಜಟಿಯಾಣೆಗೆ ನಿಂದು ಭೀಮನೆಂದೊಡೆ ಮುಳಿದಟ್ಟಿ ಕುಟ್ಟಲರಸಂ ಗದೆಗೊಂಡೊಡೆ ಭೂತಕೋಟಿಯುಂಬಡಿಗೊಳೆ ಸಂಜಯಂ ನಯದೆ ಬಗ್ಗಿಸಿದಂ ಫಣಿರಾಜಕೇತುವಂ॥೪೬॥
ಪಗೆ ಚಿತ್ರಿಂಗದನುಯ್ಯಲ್ಗಗನದೊಳುರೆ ತನ್ನ ತಂದ ಬಾಂಧವಕೃತಮಂಬಗೆಯದಹಿತಮನೆ ಬಗೆದಂಪುಗದಿರ್ಕುಮೆ ಪೋಗಿ ಕೌರವಂ ರೌರವಮಂ॥೨೬॥
ಪದುಳಂ ಕುಳ್ಳಿರ್ದೆಮಗಾಯದ ಮಾತಂ ತಗುಳೆ ಗಳಪಿ ಪೋದಂ ಸಂಧಿರ್ದದಟರೊಳಿರಿದರಿಯಂ ತಪ್ಪದೆ ಕಮ್ಮರಿಯೋಜನೆನಿಸಿದಂ ಬಿಲ್ಲೋಜಂ ॥೧೩॥
ಬಂದಂ ಬಕಾಂತಕಂ ಪೋಕೊಂದಂಬಕವೆಸರ್ಗೆ ಮುನಿದು ನಮ್ಮುಮನಿನ್ನೆಂಬಂದದೊಳೆ ಪಾರಿಪೋದುವುನಿಂದಿರದುರವಣಿಸಿ ಬಕನಿಕಾಯಕಮದರೊಳ್॥೧೯॥
ಬೆಳಗುವ ಸೊಡರೊಳ್ ಸೊಡರಂಬೆಳಗಿ ಪಲರ್ ಕೊಂಡುಪೋಗೆಯುಂ ಕುಂದದೆ ಪಜ್ಜಳಿಸುವವೊಲ್ ಜಗಮೆಲ್ಲಂಕೊಳಲುಂ ತವದಿತ್ತು ಮೆರೆವನಿರಿವ ಬೆಡಂಗಂ