ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ದೊಣೆಯಿಂದಂ ತೆಗೆವಾಗಳೊಂದು ತುಡುವಾಗಳ್ ಪತ್ತುಬಾಣಂ ಧನುರ್ಗುಣದಿಂದಂ ಬಿಡುವಲ್ಲಿ ನೂರು ಪರಿವಾಗಳ್ ಸಾಸಿರಂ ವೈರಿಮಾರ್ಗಣಮಂ ಛೇದಿಸುವಲ್ಲಿ ಲಕ್ಕೆ ನಡುವಾಗಳ್ ಕೋಟಿ ಸೇನಾಂಗದೊಳ್ಗಣನಾತೀತಮಿದೆಂದೊಡೇವೊಗಳ್ವುದೋ ಬಿಲ್ಬಲ್ಮೆಯಂ ಪಾರ್ಥನಾ॥೩॥
ಶರಸಂಧಾನಮನನ್ಯಸೈನ್ಯದೊಡಲೊಳ್ ಬಿಲ್ಬಲ್ಮೆಯಂ ತನ್ನ ಶಿಷ್ಯರ ಮೈಯೊಳ್ ನಿಜಕೀರ್ತಿಯಂ ನಿಖಿಳದಿಕ್ಚಕ್ರಂಗಳೊಳ್ ಚಿತ್ತಮಂಹರ ಪಾದಾಂಬುಜಯುಗ್ಮದೊಳ್ ನಿರಿಸಿದಂ ಚಾಪಾಗಮಾಚಾರ್ಯರೊಳ್ದೊರೆಯಾರೆಂಬಿನಮಣ್ಮಿ ಸತ್ತಳವಿದೇಂ ದ್ರೋಣಂಗೆ ಮೈವೆತ್ತುದೋ॥೫೨॥