ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 5 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇರಿಯೆಂ ಬಿಳ್ದನನೆಂಬೀಬಿರುಬಿಂದಂ ಬೀಸೆ ಗದೆಯ ಗಾಳಿಯ ಕೋಳೆಳ್ಚರಿಸಿದುದು ಭೀಮನಂ ಮೆಯ್ಮರೆದವನಂ ತಂದೆ ಸುತರ್ಗೆ ಕೂರದರೊಳರೇ॥೩೨॥
ಎನಗೆ ಮನಮಿಂದು ಶೂನ್ಯಂಮನೆ ಶೂನ್ಯಂ ಬೀಡು ಶೂನ್ಯಮಾದುದು ಸಕಲಾವನಿ ಶೂನ್ಯಮಾಯ್ತು ದುಶ್ಯಾಸನನಿಲ್ಲದೆ ಕರ್ಣನಿಲ್ಲದಾನೆಂತಿರ್ಪೆಂ॥೬೯॥
ಜತುಗೇಹಾನಲಬೀಜಮುಗ್ರವಿಷಸಂಜತಾಂಕುರಂ ಕ್ರೀಡನೋದ್ದತಿಕೃದ್ದ್ಯೂತವಿನೋದಪಲ್ಲವಚಯಂ ಪಾಂಚಾಲರಾಜಾತ್ಮಜಾಯತಕೇಶಗ್ರಹಪುಷ್ಪಮಾಗೆ ಬೆಳೆದಾ ವೈರದ್ರುಮಂ ಕೌರವಕ್ಷಿತಿಪಾಲೋರು ಕಿರೀಟಭಂಗ ಫಲಮಂ ಪೇಳ್ ಮಾಡದೇಂ ಪೋಕುಮೇ॥೫೭॥
ಮೊನೆಯೊಳಿದಿರ್ಚಿ ಸತ್ತಭಟನಂ ಗಜದೃಷ್ಟಿಯೊಳಣ್ಮಿ ಬೀರನನದಟಿಂ ಸಹಸ್ರಭಟರಂ ರಣದೊಳ್ ಪೊಣರ್ದಿಕ್ಕಿ ಸತ್ತ ಗಂಡನನರಸುತ್ತೆ ಬರ್ಪ ಸುರಸುಂದರಿಯರ್ಕಳನೀಕ್ಷಿಸುತ್ತುಮೊಯ್ಯನೆ ನಡೆದಂ ಪರಾಕ್ರಮನಿಕೇತನನಾ ಫಣಿರಾಜಕೇತನಂ॥೨೦॥
ಸ್ಥಿರಸತ್ಯವ್ರತಿಯೆಂದು ಧರ್ಮರುಚಿಯೆಂದಾ ಧರ್ಮಪುತ್ರಂ ದಯಾಪರನೆಂದೆಲ್ಲರ ಪೇಳ್ದ ಮಾತು ಪುಸಿಯಾಯ್ತೀ ಕಾರ್ಮುಕಾಚಾರ್ಯನಂಗುರುವಂ ಬ್ರಾಹ್ಮಣನಂ ತೊದಳ್ನುಡಿದು ಕೊಂದದಾ ಮೃಷಾಪಾತಕಂಪರಮೆಂಬೀ ನುಡಿಯಿಂ ಪೃಥಾಪ್ರಿಯಸುತಂ ಪಾಪಕ್ಕೆ ಪಕ್ಕಾಗನೇ॥೨೩॥