ಒಟ್ಟು 14 ಕಡೆಗಳಲ್ಲಿ , 1 ಕವಿಗಳು , 8 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರಿಯೆನಿದಂ ನಿನ್ನಿಂದಿನತೆರನಂ ನೀನೆನಗದೇಕೆ ಮುಳಿದಿರ್ಪೆಯೊ ಮೇಣ್ಮರುವಾತುಗುಡದೆ ರವಿಸುತಮರಸುಂದಿರ್ದಪೆಯೊ ಮೇಣ್ಬಳಲ್ದಿರ್ದಪೆಯೋ॥೧೫॥
ಇಂದಾನಿದೆಂ ಮೇಣಿನನಂದನ ಕೇಳ್ ಪಾಂಡುತನಯರಾದರ್ ನಿನ್ನಂಕೊಂದುಂ ದುಶ್ಯಾಸನನಂಕೊಂದುಂ ಬರ್ದುಕುವರೆ ಬರ್ದುಕರಂಗಿಧಿಪತೀ॥೩೭॥
ಇರಲಿಂತೀಮಾದ್ರಿಪುತ್ರರ್ ಬಡವುಗಳವರೇಗೆಯ್ವರಿಂ ಧರ್ಮಪುತ್ರಂಬೆರಸೀಗಳ್ ಬರ್ಕೆ ಭೀಮಂ ಹರಿಸುತನೊಡನೀ ಮೂವರುಂ ಬರ್ಕೆ ಮೇಣಯ್ವರುಮಿಂಬರ್ಕೀ ಕೃತಾಂತಾತ್ಮಜಪವನಜಗಾಂಡೀವಧನ್ವರ್ಕಳೀಮೂವರೊಳೊರ್ವಂ ಕೃಷ್ಣ ಬರ್ಕಿಂ ಪೊಣರಲನಿಬರುಂ ಬರ್ಕೆ ಮೇಣ್ ಬನ್ನಮೀವೆಂ॥೪೨॥
ಕಲಿಗಂ ಶಂಕೆಯೆ ಚಾಗಿಗಂ ಬೆರಗೆ ಮೇಣ್ ಕಟ್ಟಾಳ್ ನೆರಂಬಾರ್ವನೇಕುಲಜಂಗಂ ಮರುವಾಳೆ ಸಜ್ಜನಿಕೆಗಂ ಕಲ್ವೋಜೆಯೇ ಧರ್ಮಿಗಂಕೊಲೆಯೇ ಮಂತ್ರಿಗಮಿಚ್ಚೆಕಾರತನಮೇ ತಕ್ಕಂ ಪಿಸುಣ್ಬೇಳ್ವನೇಚಲಮಂ ಗಂಡುಮನಪ್ಪುಕೆಯ್ವೆನಗಮಾ ಕೌಂತೇಯರೊಳ್ ಸಂಧಿಯೇ॥೪೬॥
ಕಾದದಿರೆನಜ್ಜ ಪಾಂಡವರಾದರ್ ಮೇಣಿಂದಿನೊಂದೆ ಸಮರದೊಳಾಂ ಮೇಣಾದೆನದರಿಂದೆ ಪಾಂಡವರ್ಗಾದುದು ಮೇಣಾಯ್ತು ಕೌರವಂಗವನಿತಳಂ॥೫೫॥
ಗಗನಂ ಬಿಳ್ದುದೊ ಮೇಣ್ ನೆಲಕ್ಕೆ ನೆಲನೇಂಪತ್ತಿತ್ತೊ ಮೇಣಿಲ್ಲಿ ಪನ್ನಗವೃಂದಾರಕರೆಂದುಮಿರ್ಪ ಬಿಲನೋ ಮೇಣಿಲ್ಲಿ ದಿಙ್ನಾಗರಾಜಗೆ ಮೆಯ್ಗರ್ಚಿಕೊಳಲ್ಕಜ ಸಮೆದ ತೋಯೋದ್ದೇಶಮೋ ಸಂದೆಯಂಬಗೆಗಾದತ್ತೆನಿಸಿರ್ದುದೇಂ ಪಿರಿದೊ ವೈಶಂಪಾಯನಾಬ್ಜಾಕರಂ॥೧೧॥
ಪಳಿಯಂ ಕೇಳ್ದೆನೊ ಮೇಣ್ನಡೆವಳಿಯಂ ತಪ್ಪಿದೆನೊ ಕಾಣೆನಣ್ಮಿಂದಂ ಕೂರ್ತಳಿದಿವರಂ ಪಗದೆನೊ ಪಚ್ಛಳಿದೆನೊ ಪೇಳ್ ಕೂಡಿ ನಿನ್ನೊಳಂಗಾಧಿಪತಿ॥೧೪॥
ರಸೆಗಿಳಿದನೊ ಮೇಣ್ ನಾಲ್ಕುಂದೆಸೆಗಳ ಕೋಣೆಗಳೊಳುಳಿದನೋ ಖಳನಿಲ್ಲೀವಸುಮತಿಯೊಳ್ ಗಾಂಧಾರಿಯಬಸಿರಂ ಮೇಣ್ ಮಗುಳೆ ಪೋಗಿ ಪೊಕ್ಕಿರ್ದನೋ॥೨೦॥