ಒಟ್ಟು 74 ಕಡೆಗಳಲ್ಲಿ , 1 ಕವಿಗಳು , 63 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅನುಜನ ನೆತ್ತರನೀಂಟಿದವನನಿಂದಾಪ್ರಾಣಸಹಿತಮೀಂಟದೆ ದುರ್ಯೋಧನನೆಂಬ ಪೆಸರ್ಗೆ ಮುಯ್ಯಾಂಪೆನೆ ದುಶ್ಯಾಸನನ ಬನ್ನಮಂ ನೀಗುವೆನೇ॥೮॥
ಅರಗಿನಮಾಡದೊಳ್ ವಿಷದ ಲಡ್ಡುಗೆಯೊಳ್ ಕೊಲಲೆಂದು ಬಂಧುಮತ್ಸರದೊಳೆ ವೈರಮಂ ಪದೆದು ಭೀಮನನಿನ್ನಿನಿತರ್ಕೆ ತಂದ ನೀಂಮರುಳಯೊ ನೋಳ್ಪಮಿರ್ವರ ಮರುಳ್ತನಮಂ ಫಣಿರಾಜಕೇತನಾ॥೪೫॥
ಅರಸಂ ದೀಕ್ಷಿತನಿಲ್ಲಿ ಋತ್ವಿಜರುಮೆಮ್ಮೀ ನಾಲ್ವರುಂ ಸಂಗರಾಧ್ವರದೊಳ್ ತಾನುಪದೇಶಕಂ ಮುರಹರಂ ನೀನುಂ ಗೃಹೀತವ್ರತಾಚರಣವ್ಯಾಪಿಕೆಯುಂ ಭವತ್ಪರಿಭವಂ ಸಂಚಾರಕಂ ಕೌರವೇಶ್ವರನೀತಂ ಪಶುವಾಗೆಬೇಳ್ದೆನಿವಂ ಕೋಪಾಗ್ನಿಯಿಂದಗ್ನಿಜೇ॥೪೬॥
ಅರಾತೀಯ ಕವೀಶ್ವರರಾರುಂ ಮುನ್ನಾರ್ತರಿಲ್ಲ ವಾಗ್ದೇವಿಯ ಭಂಡಾರದ ಮುದ್ರೆಯನೊಡೆದಂಸಾರಸ್ವತಮೆನಿಪ ಕವಿತೆಯೊಳ್ ಕವಿರತ್ನಂ
ಅಸ಼ಮಬಲ ಭವದ್ವಿಕ್ರಮಮಸಂಭವಂ ಪೆರರ್ಗೆ ನಿನ್ನನಾನಿನಿತಂ ಪ್ರಾರ್ಥಿಸುವೆನಭಿಮನ್ಯು ನಿಜ ಸಾಹಸೈಕದೇಶಾನುಮರಣಮೆಮಗಕ್ಕೆ ಗಡಾ॥೫೭॥
ಅಸುಹೃತ್ಸೇನೆಗೆ ಸಾಲ್ವನೊರ್ವನೆ ಗಡಂ ಲುದ್ರಾವತಾರಂ ಗಡಂನೊಸಲೊಳ್ ಕಣ್ಗಡಮೆಂದು ನಚ್ಚಿ ಪೊರೆದೆಂ ತಾನಕ್ಕೆ ತಮ್ಮಮ್ಮನಕ್ಕಿಸಲಂಬಂ ತಿರುವಾಯ್ಗೆ ತಂದರಿವರೇ ತಾಮಿರ್ವರುಂ ಕಯ್ದುವಂಬಿಸುಟರ್ ಜೋಳದ ಪಾಳಿಯಂ ಬಗೆದರಿಲ್ಲಾದ್ರೌಣಿಯುಂ ದ್ರೋಣನುಂ
ಇಂದಾನಿದೆಂ ಮೇಣಿನನಂದನ ಕೇಳ್ ಪಾಂಡುತನಯರಾದರ್ ನಿನ್ನಂಕೊಂದುಂ ದುಶ್ಯಾಸನನಂಕೊಂದುಂ ಬರ್ದುಕುವರೆ ಬರ್ದುಕರಂಗಿಧಿಪತೀ॥೩೭॥
ಇದು ಲಾಕ್ಷಾಗೇಹದಾಹಕ್ಕಿದು ವಿಷಮವಿಷಾನ್ನಕ್ಕಿದಾ ನಾಡ ಜೂದಿಂಗಿದು ಪಾಂಚಾಲೀಪ್ರಪಂಚಕ್ಕಿದು ಕೃತಕಸಭಾಲೋಕನಭ್ರಾಂತಿಗೆಂದೋವದೆ ಪೊಯ್ದಂ ತೋಳ್ಗ಼ಳನಗಲ್ದುರಮಂ ಕೆನ್ನೆಯಂ ನೆತ್ತಿಯಂ ಕೋಪದೊಳಯ್ದಂ ದುರ್ನಯಕ್ಕಯ್ದೆಡೆಯನುರು ಗದಾದಂಡದಿಂ ಭೀಮಸೇನಂ॥೧೯॥
ಇಭಶೈಲಂಗಳನೇರಿಯೇರಿ ರುಧಿರಸ್ರೋತಂಗಳಂ ದಾಂಟಿದಾಂಟಿಭದೋರನೀಲಲತಾ ಪ್ರತಾನವಿಪಿನ ವ್ರಾತಂಗಳೊಳ್ ಸಿಲ್ಕಿ ಸಿಲ್ಕಿ ಭರಂಗೆಯ್ದುರದೆಯ್ದಿ ಸಂಜಯ ಶಿರಸ್ಕಂಧಾವಲಂಬಂ ಕುರುಪ್ರಭು ಕಂಡಂ ಶಲಜಾಲಜರ್ಜರಿತ ಗಾತ್ರತ್ರಾಣನಂ ದ್ರೋಣನಂ॥೪೮॥
ಈಯಲಿರಿಯಲ್ ಶರಣ್ಬುಗೆಕಾಯಲ್ ಕ್ಷತ್ರಿಯರೆ ಬಲ್ಲರಬ್ರಹ್ಮಣ್ಯಂಭೋಯೆನಲುಂ ಬ್ರಾಹ್ಮಣರವಿಧಾಯೆನಲುಂ ಬಲ್ಲರಿರಿರಲವರೆಂತರಿವರ್॥೧೬॥,
ಎತ್ತುವೆನೊ ಮಂದರಾದ್ರಿಯನೊತ್ತುವೆನೊ ರಸಾತಳಕ್ಕೆ ನೆಲನಂ ದೆಸೆಯಂಪತ್ತುವೆನೊ ಪಗೆಯ ಬೆನ್ನಂಪತ್ತುವೆನೊ ದಿಶಾಗಜಂಗಳಂ ತುತ್ತುವೆನೊ॥೧೮॥
ಎಲ್ಲಿದುವೊ ಧವಳಚಾಮರಮೆಲ್ಲಿತ್ತೊಸಿತಾತಪತ್ರಮಹಿಕೇತನಮತ್ತೆಲ್ಲಿತ್ತೊ ಮೃಗೇಂದ್ರಾಸನಮೆಲ್ಲಿದುವೋ ಲೋಲಪಾಳಿಕೇತನತತಿಗಳ್॥೪೨॥
ಒಂದೆರಡು ಮತ್ತರಂತರದಿಂದಂ ಪೊರಮಟ್ಟಪಜ್ಜೆಯಿಂ ಸಲೆ ಕೊಳನಂಪಿಂದು ಪೆರಗಾಗಿ ಪುಗೆ ಚಿಃಎಂದವನಂ ರಾಜ್ಯಲಕ್ಪ್ಮಿ ಪೇಸಿ ಬಿಸುಟ್ಟಳ್॥೯॥
ಒಡವುಟ್ಟಿದನೆಂದರಿದೊಡೆಕುಡುಗುಂ ರಾಜ್ಯಮನೆ ಧರ್ಮತನಯಂ ನಿನಗಾಂಕುಡಲಾರ್ತೆನಿಲ್ಲ ರಾಜ್ಯಕ್ಕೊಡೆಯನನರಿಯುತ್ತುಮಿರ್ದೆನಂಗಾಧಿಪತಿ॥೧೯॥
ಕದನದೊಳುಣ್ಮಿದೊಳ್ಮಿದುಳ ಕರ್ದಮದೊಳ್ ಜಗುಳ್ದಂಘ್ರಿ ಜಾರಿ ಪೋಪುದುಮೊಡನಿರ್ದ ಸಂಜಯನಿಳೇಶ್ವರನಂ ಪಿಡಿದೂರುಭಂಗಮಾಗದೆ ವಲಮೆಂದೊಡಾಗದೆನೆ ಪುಲ್ಮರುಳೊಂದೆಡೆವೋಗಿ ಭೀಮ ಕೋಪದೆ ನಿನಗೂರುಭಂಗಭಯಮಾಗದೆ ಪೋಕುಮೆ ಕೌರವೇಶ್ವರಾ॥೪೪॥