ಪ್ರಾರಂಭ ಪದದ ಹುಡುಕು
ಇಂದಾನಿದೆಂ ಮೇಣಿನನಂದನ ಕೇಳ್ ಪಾಂಡುತನಯರಾದರ್ ನಿನ್ನಂಕೊಂದುಂ ದುಶ್ಯಾಸನನಂಕೊಂದುಂ ಬರ್ದುಕುವರೆ ಬರ್ದುಕರಂಗಿಧಿಪತೀ॥೩೭॥
ಇಡೆ ತೊಡೆಯನುಡಿದು ನೆಟ್ಟನೆಕೆಡೆಯುತ್ತುಂ ಕರ್ಚಿ ನೆಲನನಾನಿದನೆಂತುಂಬಿಡೆನೆಂಬ ತೆರದೆ ಕುಲಗಿರಿಕೆಡೆವಂದದೆ ಕೌರವೇಂದ್ರನಾಗಳ್ ಕೆಡೆದಂ॥೩೭॥
ಇದರೊಳ್ ಮೂರ್ಧಾಭಿಷಿಕ್ತರ್ ಮಣಿಮಕುಟಧರರ್ ಕೃಷ್ಣೆ ಬಾಹಾಬಳಾಗ್ರ್ಯರ್ಕದನಪ್ರೋಚ್ಚಂಡದಂಡಕ್ರಮವಿಜಿತರಿಪುಕ್ಷತ್ರಿಯರ್ ವೀರಲಕ್ಷ್ಮೀಸದನರ್ಸೋಮಾಮೃತಾಸ್ವಾದನಶುಚಿವದನರ್ ಮುನ್ಮಳ್ಕಾಡಿದರ್ ನೋಡಿದು ನಿನ್ನೀ ಕೇಶಪಾಶಂ ಕುರುಕುಲಪತಿಗಾಯ್ತಲ್ತೆ ಕೀನಾಶಪಾಶಂ॥೪೯॥
ಇದು ಲಾಕ್ಷಾಗೇಹದಾಹಕ್ಕಿದು ವಿಷಮವಿಷಾನ್ನಕ್ಕಿದಾ ನಾಡ ಜೂದಿಂಗಿದು ಪಾಂಚಾಲೀಪ್ರಪಂಚಕ್ಕಿದು ಕೃತಕಸಭಾಲೋಕನಭ್ರಾಂತಿಗೆಂದೋವದೆ ಪೊಯ್ದಂ ತೋಳ್ಗ಼ಳನಗಲ್ದುರಮಂ ಕೆನ್ನೆಯಂ ನೆತ್ತಿಯಂ ಕೋಪದೊಳಯ್ದಂ ದುರ್ನಯಕ್ಕಯ್ದೆಡೆಯನುರು ಗದಾದಂಡದಿಂ ಭೀಮಸೇನಂ॥೧೯॥
ಇನಸುತ ಗಾಂಡಿವಿ ಸಂಮೋಹನಾಸ್ತ್ರದಿಂದೆಚ್ಚು ನಿದ್ರೆಯಂ ಮಾಡಿದನಂದಿನ ಗೋಗ್ರಹಣದೊಳೀಗಳ್ನಿನಗಿಂತೀ ದೀರ್ಘನಿದ್ರೆಯಂ ಮಾಡಿದನೇ॥೨೧॥
ಇನಸುತನಿರವಂ ದುಶ್ಯಾಸನನಿರವಂ ಕಂಡುಮಿನ್ನುಮೆನ್ನಸುವಿದು ನೆಟ್ಟನೆ ಪೋದುದಿಲ್ಲ ಕಲ್ಲೆರ್ದೆತನದಿಂದೆನ್ನಂತು ಬರ್ದನಾವನುಮೊಳನೇ॥೨೮॥
ಇನಿಸಿನಿಸುತಿಂಬೆವೊರ್ಮೆಯೆತಿನೆ ತವುಗುಮಿದೆಂದು ತಾಯುಮಾನೆಯ ಪೆಣನಂತಿನಲಾರದೆ ಪೆರರ್ಗಿಕ್ಕದೆಮನಮಂ ಪಸುತಿರ್ದುವಲ್ಲಿ ಲೋಭಿಮರುಳ್ಗಳ್॥೩೮॥
ಇಭಶೈಲಂಗಳನೇರಿಯೇರಿ ರುಧಿರಸ್ರೋತಂಗಳಂ ದಾಂಟಿದಾಂಟಿಭದೋರನೀಲಲತಾ ಪ್ರತಾನವಿಪಿನ ವ್ರಾತಂಗಳೊಳ್ ಸಿಲ್ಕಿ ಸಿಲ್ಕಿ ಭರಂಗೆಯ್ದುರದೆಯ್ದಿ ಸಂಜಯ ಶಿರಸ್ಕಂಧಾವಲಂಬಂ ಕುರುಪ್ರಭು ಕಂಡಂ ಶಲಜಾಲಜರ್ಜರಿತ ಗಾತ್ರತ್ರಾಣನಂ ದ್ರೋಣನಂ॥೪೮॥
ಇರಲಿಂತೀಮಾದ್ರಿಪುತ್ರರ್ ಬಡವುಗಳವರೇಗೆಯ್ವರಿಂ ಧರ್ಮಪುತ್ರಂಬೆರಸೀಗಳ್ ಬರ್ಕೆ ಭೀಮಂ ಹರಿಸುತನೊಡನೀ ಮೂವರುಂ ಬರ್ಕೆ ಮೇಣಯ್ವರುಮಿಂಬರ್ಕೀ ಕೃತಾಂತಾತ್ಮಜಪವನಜಗಾಂಡೀವಧನ್ವರ್ಕಳೀಮೂವರೊಳೊರ್ವಂ ಕೃಷ್ಣ ಬರ್ಕಿಂ ಪೊಣರಲನಿಬರುಂ ಬರ್ಕೆ ಮೇಣ್ ಬನ್ನಮೀವೆಂ॥೪೨॥
ಇರಿಯೆಂ ಬಿಳ್ದನನೆಂಬೀಬಿರುಬಿಂದಂ ಬೀಸೆ ಗದೆಯ ಗಾಳಿಯ ಕೋಳೆಳ್ಚರಿಸಿದುದು ಭೀಮನಂ ಮೆಯ್ಮರೆದವನಂ ತಂದೆ ಸುತರ್ಗೆ ಕೂರದರೊಳರೇ॥೩೨॥