ಪ್ರಾರಂಭ ಪದದ ಹುಡುಕು

(20) (5) (10) (3) (1) (0) (0) (0) (8) (0) (0) (6) (1) (0) ಅಂ (1) ಅಃ (0) (20) (1) (10) (0) (0) (2) (0) (7) (0) (0) (0) (0) (0) (0) (0) (12) (0) (6) (3) (20) (19) (0) (8) (2) (10) (1) (2) (0) (0) (5) (2) (0) (6) (3) (0)
ಜತುಗೇಹಾನಲದಾಹದಿಂ ವಿಷವಿಶೇಷಲಿಪ್ತಗುಪ್ತಾನ್ನದಿಂ ಕೃತಕದ್ಯೂತವಿನೋದದಿಂ ದ್ರುಪದಜಾಕೇಶಾಂಬರಕೃಷ್ಟಿಯಿಂ ಧೃತರಾಷ್ಟ್ರಾತ್ಮಜ ಪಾಂಡುರಾಜಸುತರಂ ಮುನ್ನಂ ಕೊಲಲ್ ಕೋರಿದಯ್ ಗಥಕಾಲಂ ಲಯಕಾಲಮಾಯ್ತು ನಿನಗಿನ್ನಾಯ್ತಂತ್ಯಕಾಲಂ ಗಡಾ॥೪೧॥
--------------
ರನ್ನ
ಜತುಗೇಹಾನಲಬೀಜಮುಗ್ರವಿಷಸಂಜತಾಂಕುರಂ ಕ್ರೀಡನೋ ದ್ದತಿಕೃದ್ದ್ಯೂತವಿನೋದಪಲ್ಲವಚಯಂ ಪಾಂಚಾಲರಾಜಾತ್ಮಜಾ ಯತಕೇಶಗ್ರಹಪುಷ್ಪಮಾಗೆ ಬೆಳೆದಾ ವೈರದ್ರುಮಂ ಕೌರವ ಕ್ಷಿತಿಪಾಲೋರು ಕಿರೀಟಭಂಗ ಫಲಮಂ ಪೇಳ್ ಮಾಡದೇಂ ಪೋಕುಮೇ॥೫೭॥
--------------
ರನ್ನ
ಜನಕಂಗೆ ಜಲಾಂಜಲಿಯಂ ತನೂಭವಂ ಕುಡುವುದುಚಿತಮದುಗೆಟ್ಟೀಗಳ್ ನಿನಗಾಂ ಕುಡುವಂತಾದುದೆ ತನೂಜ ನೀಂ ಕ್ರಮವಿಪರ್ಯಯಂ ಮಾಡುವುದೇ॥೬೨॥
--------------
ರನ್ನ
ಜನನೀ ಸ್ತನ್ಯಮನುಂಡೆನಾಂ ಬಳಿಕೆ ನೀಂ ಸೋಮಾಮೃತಂ ದಿವ್ಯ ಭೋ ಜನಮೆಂಬಿಂತಿವನುಂಡೆನಾಂ ಬಳಿಕ ನೀಂ ಬಾಲತ್ವದಿಂದೆಲ್ಲಿಯುಂ ವಿನಯೋಲ್ಲಂಘನಮಾದುದಿಲ್ವ ಮರಣಕ್ಕನ್ನಿಂದೆ ನೀಂ ಮುಂಚಿದಯ್ ಮೊನೆಯೊಳ್ ಸೂಳ್ ತಡಮಾಯ್ತಿದೊಂದೆಡೆಯೊಳಂ ಹಾ ವತ್ಸ ದುಶ್ಯಾಸನಾ॥೭॥
--------------
ರನ್ನ
ಜಲದಾನಕ್ರಿಯೆಯಂ ವಾ ಗ್ಜಲದಿಂ ಕೋಪಾಗ್ನಿಯಿಂದೆ ದಹನಕ್ರಿಯೆಯಂ ಕೆಳೆಯಂಗೆ ಮಾಡಿದಯ್ ಕುರು ಕುಲದರ್ಪಣ ಮರೆವುದಿನ್ನಹರ್ಪತಿಸುತನಂ॥೩೨॥
--------------
ರನ್ನ
ಜಲಧಿಗಳೇಳುಂ ಭೂಭೃ ತ್ಕುಲಂಗಳಂ ರಿಪುಗೆ ಸಿರಿಯನೀವಂತೆತ್ತಂ ತಳಮಳವಿಗಳಿಯೆ ಕುರುಕುಲ ತಿಳಕಂ ರಿಪುಗೆಂತುಮೀವನಲ್ಲಂ ಶ್ರೀಯಂ॥೫೬॥
--------------
ರನ್ನ
ಜಳದೊಳ್ ಮೀನಿರ್ಪವೊಲ್ ನೀಂ ಕೊಳದೊಳೆ ಮುಳುಗಿರ್ದಕಟಾ ಕೋಡಸೇಡಿಂ ಗೊಳಗಾದಯ್ ನಿನ್ನ ದುರ್ಯೋಧನವೆಸರ್ಗಿದು ಲಜ್ಜಾಕರಂ ತೋರಿದಯ್ ನಿ ನ್ನಳವಂ ಚಿಃ ಸತ್ತರೇಂ ಪುಟ್ಟರೆ ಪೊರಮಡು ನೀಂ ಕಯ್ದುಗೊಳ್ ಕೌರವೇಂದ್ರಾ ಚಳವಜ್ರಂ ಬಂದನೀಗಳ್ ಕುರುಕುಲಮಥನೋದ್ಭೀಕರಂ ಭೀಮಸೇನಂ॥೧೩॥
--------------
ರನ್ನ
-->